ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಹಿಂದುಳಿದ ವರ್ಗ ವಿದ್ಯಾರ್ಥಿ ನಿಲಯ ಸುಧಾರಣೆಗೆ 250 ಕೋಟಿ ರೂ. ಮಂಜೂರಾತಿಗೆ ತೀರ್ಮಾನ; ಸಿಎಂ

ಬೆಂಗಳೂರು: ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಸ್ಥಿತಿಗತಿ ಸುಧಾರಣೆ ಹಾಗೂ ಹೆಚ್ಚಿನ ಸೌಲಭ್ಯ ಒದಗಿಸಲು ಒಟ್ಟು 250 ಕೋಟಿ ರೂ. ಮಂಜೂರು ಮಾಡಲು ತೀರ್ಮಾನಿಸಲಾಗಿದೆ ಎಂದು‌ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆ ಹಾಗೂ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ರಾಜ್ಯ ಸರ್ಕಾರದ ಎಲ್ಲ ವಿದ್ಯಾರ್ಥಿನಿಲಯಗಳ ಸಾಮರ್ಥ್ಯವನ್ನು ಶೇ. 25 ರಷ್ಟು ಹೆಚ್ಚಿಸಲು ಅನುದಾನವನ್ನು ನೀಡಲಾಗಿದೆ. ರಾಜ್ಯದ ಒಟ್ಟು 2439 ಹಾಸ್ಟೆಲ್‍ಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ವಿದ್ಯಾರ್ಥಿ ವೇತನದಲ್ಲಿ ತಲಾ 150 ರೂ. ಹೆಚ್ಚಿಸಲಾಗಿದೆ. 195 ವಿದ್ಯಾರ್ಥಿನಿಲಯ ಕಟ್ಟಡಗಳು ನಿರ್ಮಾಣದ ವಿವಿಧ ಹಂತದಲ್ಲಿವೆ. ಕನಕದಾಸರ ಹೆಸರಿನಲ್ಲಿ 50 ಹೊಸ ಹಾಸ್ಟೆಲ್‍ಗಳನ್ನು ನಿರ್ಮಿಸಲಾಗುತ್ತಿದೆ. ರಾಜ್ಯದ 5 ಶೈಕ್ಷಣಿಕ ಕೇಂದ್ರಗಳಲ್ಲಿ 1000 ಮಕ್ಕಳಿಗೆ ಬಹುಮಹಡಿ ವಸತಿ ಸಮುಚ್ಚಯ ನಿರ್ಮಿಸಲಾಗುತ್ತಿದೆ. ಈ ಯೋಜನೆಯನ್ನು 5000 ಮಕ್ಕಳ ಸಾಮರ್ಥ್ಯಕ್ಕೇರಿಸುವ ಗುರಿ ಇದ್ದು, ಹಣವನ್ನು ಒದಗಿಸಲಾಗಿದೆ. ದೇವರಾಜ ಅರಸು ಹೆಸರಿನಲ್ಲಿ ಪಿಹೆಚ್‍ಡಿ ಮಾಡುವ ವಿದ್ಯಾರ್ಥಿಗಳಿಗೆ ಒಟ್ಟು 4 ಕೋಟಿ ಅನುದಾನ ಬಿಡುಗಡೆ ಮಾಡಿ ಆದೇಶ ನೀಡಲಾಗಿದೆ. ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕೆ 10 ಕೋಟಿ ಅನುದಾನ ಹೆಚ್ಚಿಗೆ ನೀಡಲಾಗಿದೆ ಎಂದರು.

ನಾರಾಯಣ ಗುರು ಹೆಸರಿನಲ್ಲಿ ತಲಾ 30 ಕೋಟಿ ರೂ. ವೆಚ್ಚದಲ್ಲಿ 4 ಶಾಲೆಗಳನ್ನು ಪ್ರಾರಂಭಿಸಲಾಗುವುದು. ಹಿಂದುಳಿದ ವರ್ಗದ ವಿವಿಧ ನಿಗಮ ಮಂಡಳಿಗೆ ಸುಮಾರು 800 ಕೋಟಿ ರೂ. ಅನುದಾನವನ್ನು ಅಧಿಕವಾಗಿ ನೀಡಲಾಗಿದೆ. ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರತಿ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದರ ಯುವಕರ ಸಂಘ ಯೋಜನೆಯಡಿ 10 ಲಕ್ಷ ರೂ. ಅನುದಾನ, ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ಸೌಲಭ್ಯ, ಬ್ಯಾಂಕ್ ಜೋಡಣೆ, ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ 5 ಲಕ್ಷ ಮಹಿಳೆಯರಿಗೆ ಅನುಕೂಲ ಕಲ್ಪಿಸಲಾಗುತ್ತಿದೆ. ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿರುವ ಮಠಮಾನ್ಯಗಳಿಗೆ 129 ಕೋಟಿ ರೂ. ನೀಡಲಾಗಿದೆ. ದೇವರಾಜ ಅರಸು ಅವರ ವಿಚಾರಗಳನ್ನು, ಕನಸುಗಳನ್ನು ನನಸು ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಅವರ ಸಾಮಾಜಿಕ ನ್ಯಾಯದ ಪರಿಕಲ್ಪನೆ ಸಾಕಾರಗೊಳಿಸಲಾಗುವುದು ಎಂದು ತಿಳಿಸಿದರು.

Edited By : Nagesh Gaonkar
PublicNext

PublicNext

20/08/2022 10:16 pm

Cinque Terre

36.36 K

Cinque Terre

0

ಸಂಬಂಧಿತ ಸುದ್ದಿ