ಬೆಂಗಳೂರು: ಕಾಂಗ್ರೆಸ್ ಟ್ವೀಟ್ ಮೂಲಕ ಬಿಜೆಪಿಗೆ ಪ್ರಶ್ನೆಗಳನ್ನ ಕೇಳ್ತಿದೆ. ಸಿದ್ದರಾಮಯ್ಯ ಗೆಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತ ಎಂಬ ಕಾಗಕ್ಕ ಗುಬ್ಬಕ್ಕನ ಕತೆ ಕಟ್ಟಿರುವ ಬಿಜೆಪಿ ಕರ್ನಾಟಕ ಉತ್ತರಿಸಬೇಕು.ಅವರು ಕಾಂಗ್ರೆಸ್ ಕಾರ್ಯಕರ್ತರೇ ಆಗಿದ್ದರೆ.ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಠಾಣೆಯಿಂದ ಜಾಮೀನು ಕೊಟ್ಟು ಕರೆತಂದಿದ್ದೇಕೆ? ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಆತ ಅಪ್ಪಚ್ಚು ರಂಜನ್‌ಗೇಕೆ ಆಪ್ತನಾಗಿದ್ದಾನೆ.ಬಿಜೆಪಿ ಹೇಳುವ ಸುಳ್ಳುಗಳಿಗೆ 'ಸತ್ಯ'ವೇ ಕಂಗೆಟ್ಟು ದೇಶ ಬಿಟ್ಟು ಓಡಿ ಹೋಗಲಿದೆ!.ಕಾರಿಗೆ ಮೊಟ್ಟೆ ಎಸೆದವರು ಕಾಂಗ್ರೆಸ್‌ನವರು ಎಂಬ ಕಟ್ಟುಕತೆ ಸೃಷ್ಟಿಸುವ ಮುನ್ನ ಉತ್ತರಿಸಿ.
ಈ ವ್ಯಕ್ತಿಯ ಜೊತೆ ಅಪ್ಪಚ್ಚು ರಂಜನ್ ಅವರಿಗೆ ಏನು ಕೆಲಸ?ಸ್ಥಳೀಯ ಕಾಂಗ್ರೆಸ್ ಮುಖಂಡರಿಗೇ ಪರಿಚಯವಿಲ್ಲದ ಆತ ಕಾಂಗ್ರೆಸ್ ಕಾರ್ಯಕರ್ತನಾಗುವುದು ಹೇಗೆ? ಎಂದು ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನ ಕಾಂಗ್ರೆಸ್ ಟ್ವೀಟ್ ಮೂಲಕ ಕೇಳಿದೆ.
PublicNext
20/08/2022 10:33 pm