ದೇವನಹಳ್ಳಿ: ಲಿಂಗಾಯತ ವೀರಶೈವ ಧರ್ಮರಾಜಕಾರಣಕ್ಕೆ ಕೈ ಹಾಕಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರಶ್ಚಾತಾಪ ಪಟ್ಟರೆ ಸಾಲದು ಪ್ರಾಯಶ್ಚಿತ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ದೇವನಹಳ್ಳಿಯಲ್ಲಿ ನಿನ್ನೆ ನಡೆದ ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಶಿಕ್ಷಣ ವರ್ಗದ ಸಭೆಗೂ ಮುನ್ನ ಮಾತನಾಡಿದ ಕೇಂದ್ರ ಸಚಿವರು, ಸಿದ್ದರಾಮಯ್ಯ ಅವರ ಹೇಳಿಕೆ ಹಿನ್ನೆಲೆಯಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಸಿದ್ದರಾಮಯ್ಯ ಅವರಿಗೆ ಈಗ ದೇವರು ಹಾಗೂ ಹಿಂದು ಧರ್ಮದ ಮಹತ್ವ ಗೊತ್ತಾಗ್ತಿದೆ. ಹೀಗಾಗಿ ಸಿದ್ದರಾಮಯ್ಯ ಅವರು ಧರ್ಮ ರಾಜಕಾರಣ ಮಾಡಲ್ಲ ಎಂದು ಈಗ ಹೇಳಿದ್ದಾರೆ ಎಂದರು.
ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್ ದೇವನಹಳ್ಳಿ.
PublicNext
21/08/2022 11:30 am