ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಯಲಹಂಕದಲ್ಲಿ ನೆಲೆ ಕಳೆದುಕೊಳ್ಳುತ್ತಿರುವ ಕಾಂಗ್ರೆಸ್, ಜೆಡಿಎಸ್

ಯಲಹಂಕ: ಯಲಹಂಕದ ಹೆಸರಘಟ್ಟ ಹೋಬಳಿಯ ಹುರುಳಿಚಿಕ್ಕನಹಳ್ಳಿ ಮತ್ತು ಕಸಘಟ್ಟಪುರ ಗ್ರಾಮ ಪಂಚಾಯ್ತಿಯ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ವಶದಲ್ಲಿದ್ದ ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸರ್ವ ಸದಸ್ಯರು, ಕಾಂಗ್ರೆಸ್ ಮತ್ತು ಜೆಡಿಎಸ್ ತೊರೆದು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ.

ಹೆಸರಘಟ್ಟದ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ರಂಗಸ್ವಾಮಿ ಪ್ರಮುಖ ನಾಯಕರು ಮತ್ತು ಅವರ ಬೆಂಬಿಲಿಗರು ಬಿಜೆಪಿ ಸೇರಿದರು. ಹುರಳಿಚಿಕ್ಕನಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ರಘು, ಉಪಾಧ್ಯಕ್ಷ ಲತಾ ರಾಜು, ಸದಸ್ಯರೆಲ್ಲಾ ಬಿಜೆಪಿ ಸೇರಿದರು. ಇನ್ನು ಕಸಘಟ್ಟಪುರ ಗ್ರಾಮ ಪಂಚಾಯ್ತಿಯ ಕಿರಣ್, ಮಹೇಶ್, ತಿಮ್ಮೇಗೌಡ ಹಾಗೂ ಡೈರಿ ಅಧ್ಯಕ್ಷ ಅಜಯ್ ಬಿಜೆಪಿ ಸೇರ್ಪಡೆಯಾದರು. ಹೆಸರಘಟ್ಟ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಅವರ ನೇತೃತ್ವದ ಮುಖಂಡರು ಹಾಗೂ ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಸೇರ್ಪಡೆಯಾಗುತ್ತಿದ್ದಾರೆ.

ಇಷ್ಟೆಲ್ಲಾ ಬೆಳವಣಿಗೆ ನೋಡುತ್ತಿದ್ದರೆ, ಬಿಜೆಪಿ ಪಕ್ಷಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಂದ ಸಾವಿರಾರು ಸಂಖ್ಯೆಯಲ್ಲಿ ಸೇರ್ಪಡೆಯಾಗುತ್ತಿರುವುದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಯಲಹಂಕ ಕ್ಷೇತ್ರದಲ್ಲಿ ಭಾರಿ ಹಿನ್ನಡೆಯಾಗುತ್ತದೆ ಎನ್ನುತ್ತಿದೆ ರಾಜಕೀಯ ಪಡಸಾಲೆ.

ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್ ಯಲಹಂಕ..

Edited By : Vijay Kumar
Kshetra Samachara

Kshetra Samachara

22/08/2022 10:27 am

Cinque Terre

1.2 K

Cinque Terre

0

ಸಂಬಂಧಿತ ಸುದ್ದಿ