ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಗ್ರಾಮ ಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳಿಗೆ ಗ್ರಾಮಸ್ಥರಿಂದ ಫುಲ್ ಕ್ಲಾಸ್

ಆನೇಕಲ್: ಜನಸಾಮಾನ್ಯರ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಗ್ರಾಮಸಭೆ ಕೈಕೊಂಡಿದೆ ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಚುನಾಯಿತ ಪ್ರತಿನಿಧಿಗಳು ನಿರ್ಲಕ್ಷ್ಯಕ್ಕೆ ಗ್ರಾಮಸಭೆಗಳು ಹಳ್ಳ ಹಿಡಿದಿವೆ. ಚುನಾಯಿತ ಪ್ರತಿನಿಧಿಗಳಿಗೆ ಗ್ರಾಮಸ್ಥರು ಫುಲ್ ಕ್ಲಾಸ್ ತೆಗೆದುಕೊಂಡಿರುವ ಘಟನೆ ನಡೆದಿದೆ.

ಆನೇಕಲ್ ತಾಲೂಕಿನ ಬಳ್ಳೂರು ಗ್ರಾಮ ಪಂಚಾಯಿತಿ ಹಳೆ ಹಳ್ಳಿ ಮುನೇಶ್ವರ ಆವರಣದಲ್ಲಿ ಮೊದಲ ಸುತ್ತಿನ ಗ್ರಾಮ ಸಭೆಯನ್ನು ಹಮ್ಮಿಕೊಂಡಿದ್ದರು, ಇನ್ನು ಪ್ರಮುಖವಾಗಿ ಕುಡಿಯುವ ನೀರು ರಸ್ತೆ ಒಳಚರಂಡಿ ಮೂಲಭೂತ ಸೌಕರ್ಯಗಳ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು. ಅಲ್ಲದೆ ಹಳೆ ಹಳ್ಳಿ ಗ್ರಾಮದಲ್ಲಿ ಸರ್ವೆ ನಂಬರ್ 27 ಸರ್ಕಾರಿ ಆಶ್ರಯ ಯೋಜನೆ ಅಡಿ ಮಂಜೂರುದ ಜಾಗದಲ್ಲಿ 3 ಎಕರೆ 28 ಗುಂಟೆ ಹಳೆಹಳ್ಳಿ ಗ್ರಾಮದವರಿಗೆ ಮಾತ್ರ ಕೊಡುವಂತೆ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಪಟ್ಟು ಹಿಡಿದರು.

ಇನ್ನು ಆಶ್ರಯ ಯೋಜನೆ ಅಡಿಯಲ್ಲಿ ಮನೆಗಳನ್ನು ಹಂಚುವ ವಿಚಾರದಲ್ಲಿ ಗ್ರಾಮಸ್ಥರಿಗೂ ಹಾಗೂ ಚುನಾಯಿತ ಪ್ರತಿನಿಧಿಗಳಿಗೆ ಗಲಾಟೆ ನಡೆದು ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು, ಪರಿಸ್ಥಿತಿ ಅರಿತ ಕೂಡಲೇ ಪೊಲೀಸರು ಮಧ್ಯ ಪ್ರವೇಶಿಸಿ ಗಲಾಟೆ ತಡೆದು ಗ್ರಾಮ ಸಭೆ ನಡೆಯಲು ಅನುವು ಮಾಡಿಕೊಟ್ಟರು. 28 ಇಲಾಖೆಗಳ ಪೈಕಿ ಕೇವಲ ಬೆರಳೆಣಿಕೆಯಷ್ಟು ಅಧಿಕಾರಿಗಳು ಭಾಗಿಯಾಗಿದ್ದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಇನ್ನು ಗ್ರಾಮ ಸಭೆ ಕಾಟಾಚಾರಕ್ಕೆ ನಡೆದಿದೆ, ಅಂತ ಅಲ್ಲಿನ ಗ್ರಾಮಸ್ಥರು ಹಾಗೂ ಸದಸ್ಯರು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ಹರೀಶ್ ಗೌತಮನಂದ ಪಬ್ಲಿಕ್ ನೆಕ್ಸ್ಟ್ ಆನೇಕಲ್

Edited By : Nagesh Gaonkar
PublicNext

PublicNext

22/08/2022 10:14 pm

Cinque Terre

30.2 K

Cinque Terre

1

ಸಂಬಂಧಿತ ಸುದ್ದಿ