ಬೆಂಗಳೂರು: ಮಾಂಸಹಾರ ತಿನ್ನುವುದು ತಪ್ಪಾದರೆ ಮಾಂಸಹಾರಿಗಳು ನಮ್ಮ ಪಕ್ಷಕ್ಕೆ ಓಟು ಹಾಕುವುದು ಬೇಡ ಎಂದು ಹೇಳಲಿ ಹೀಗೆ ಹೇಳುವ ತಾಕತ್ತು BJPಯವರಿಗಿದೆಯೇ? ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ ಚಿಕ್ಕಮಗಳೂರು, ಕೊಡಗು ಮತ್ತು ಹಾಸನದ ಸಕಲೇಶಪುರದಲ್ಲಿ ಮದುವೆಯ ದಿನವೇ ಮಾಂಸಹಾರ ಮಾಡುತ್ತಾರೆ.ಅದು ಅವರ ಆಹಾರ ಪದ್ಧತಿ.ಇನ್ನು ಮಲೆನಾಡಿನ ಕೆಲವು ಕಡೆ ಎಲ್ಲಾ ಹಬ್ಬಗಳಿಗೂ ಮಾಂಸಹಾರ ಮಾಡುತ್ತಾರೆ.ಸಿ.ಟಿ ರವಿ ಮತ್ತು ಪ್ರತಾಪ ಸಿಂಹ ಮಲೆನಾಡಿನವರು. ಗಣೇಶ ಹಬ್ಬದ ದಿವಸ ಅವರ ಭಾಗದಲ್ಲಿ ಮಾಂಸಹಾರ ಮಾಡುವುದನ್ನು ಅವರು ನಿರಾಕರಿಸುತ್ತಾರೆಯೇ?ಸಿದ್ದರಾಮಯ್ಯ ಕಂಡರೆ ಬಿಜೆಪಿಯವರಿಗೆ ನವರಂಧ್ರಗಳಲ್ಲೂ ನಡುಕ ಶುರುವಾಗಿದೆ ಎಂದು ಟ್ವೀಟ್ ಮೂಲಕ ಬಿಜೆಪಿ ನಾಯಕ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಅವರು ಏನು ತಿನ್ನುತ್ತಾರೆ, ಏನು ಉಡುತ್ತಾರೆ ಎಂದು ವಿವಾದ ಸೃಷ್ಟಿಸಿ ರಾಜಕೀಯ ಮಾಡುತ್ತಿದ್ದಾರೆ.ಏನನ್ನು ತಿನ್ನಬೇಕು, ತಿನ್ನಬಾರದು ಎಂಬುದನ್ನ ಬಿಜೆಪಿಯವರು ನಿರ್ಧರಿಸಬೇಕೆ? ಬಿಜೆಪಿ ವಿರುದ್ಧ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಮಾಂಸಹಾರ ಸೇವನೆಗೆ ಸಂಬಂಧಿಸಿದಂತೆ ಬಿಜೆಪಿಯವರು ಕೀಳು ರಾಜಕಾರಣ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರಾಗಲಿ ಅಥವಾ ಇನ್ಯಾರೆ ಆಗಿರಲಿ ಏನನ್ನು ತಿನ್ನಬೇಕು? ಏನನ್ನು ತಿನ್ನಬಾರದು ಎಂದು BJPಯವರು ನಿರ್ಧರಿಸಬೇಕೆ? ನಮ್ಮ ಆಹಾರ, ನಮ್ಮ ಹಕ್ಕು.ಇದನ್ನು ಕೇಳಲು BJPಯವರಿಗೆ ಅಧಿಕಾರ ಕೊಟ್ಟವರ್ಯಾರು? ಊಟ ತನ್ನಿಚ್ಛೆ, ನೋಟ ಪರರಿಚ್ಛೆ ಅಲ್ಲವೇ ?ಬೇಡರ ಕಣ್ಣಪ್ಪ ಶಿವಲಿಂಗಕ್ಕೆ ಮಾಂಸದ ನೈವೇದ್ಯ ಇಟ್ಟ.ಶಿವ ಕಣ್ಣಪ್ಪನಿಗೆ ಒಲಿಯಲಿಲ್ಲವೆ? ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲುಬೇಡ, ಇದೇ ಅಂತರಂಗ-ಶುದ್ಧಿ, ಇದೇ ಬಹಿರಂಗ-ಶುದ್ಧಿ, ಇದೇ ಕೂಡಲಸಂಗಮನೊಲಿಸುವ ಪರಿ! ಎಂದಿದ್ದಾರೆ ಬಸವಣ್ಣ. ಭಕ್ತಿ ಶುದ್ಧವಾಗಿರಬೇಕು ಎಂದು ಹೀಗೆ ಟ್ವೀಟ್ ಮೂಲಕ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದಾರೆ.
PublicNext
23/08/2022 11:31 am