ಬೆಂಗಳೂರು- ಕೊಡಗಿನಲ್ಲಿ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿದ್ದರಾಮಯ್ಯ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಸಿದ್ದರಾಮಯ್ಯಗೆ ಜೀವ ಬೆದರಿಕೆ ಇರುವುದರಿಂದ ಸಾರ್ವಜನಿಕರು ಪ್ರವೇಶ ಮಾಡುವುದರಿಂದ ಸರ್ಕಾರಿ ನಿವಾಸದಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ.
ಇನ್ನೂ ಸಿದ್ದರಾಮಯ್ಯ ನಿವಾಸಕ್ಕೆ ಭದ್ರತೆ ಹೆಚ್ಚಿಸುವಂತೆ ಸಿಎಂ ಸೂಚನೆ ಕೊಟ್ಟು ಮೂರು ದಿನಗಳ ಬಳಿಕ ಇಂದು ಮೆಟಲ್ ಡಿಟೆಕ್ಟರ್ ಅಳವಡಿಸಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
PublicNext
23/08/2022 12:29 pm