ಬೆಂಗಳೂರು: ಬೆಂಗಳೂರಿನ ಶಿವಾನಂದ ವೃತ್ತದಲ್ಲಿ 39 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸ್ಟೀಲ್ ಬ್ರಿಡ್ಜ್ ಬಿಜೆಪಿ ಸರ್ಕಾರದ 40% ಕಮಿಷನ್ ದಂಧೆಯ ಅಕ್ರಮ ಶಿಶು ಎಂದು ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ ಆರೋಪಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮೋಹನ್ ದಾಸರಿ, ಶಿವಾನಂದ ವೃತ್ತದ ಸ್ಟೀಲ್ ಸೇತುವೆಯನ್ನು ಕಳಪೆ ಗುಣಮಟ್ಟದ ಬೇರಿಂಗ್, ಶಾಕ್ ಅಬ್ಸಾರ್ವರ್ ಬಳಸಿ ನಿರ್ಮಿಸಲಾಗಿದೆ. ಆಗಸ್ಟ್ 15ರಿಂದ ಒಂದು ಬದಿಯ ಸಂಚಾರ ಆರಂಭವಾಗಿದ್ದು, ಅಲ್ಲಿ ಸಂಚರಿಸಿದರೆ ಕಳಪೆ ಕಾಮಗಾರಿ ಸ್ಪಷ್ಟವಾಗುತ್ತಿದೆ.
ಸೇತುವೆಯಲ್ಲಿ ಸುಮಾರು 20 ಮೀಟರ್‌ಗೊಮ್ಮೆ ಜಾಯಿಂಟ್‌ಗಳಿದ್ದು, ಅಲ್ಲಿ ವಾಹನ ಸವಾರರಿಗೆ ಕಿರಿಕಿರಿಯಾಗುವಂತಹ ಅವೈಜ್ಞಾನಿಕ ಹಂಪ್ಸ್ ನಿರ್ಮಿಸಲಾಗಿದೆ. ಲಘು ವಾಹನ ಸಂಚರಿಸಿದರೂ ಸೇತುವೆಯು ವೈಬ್ರೇಟ್ ಆಗುತ್ತಿದೆ ಎಂದು ಆತಂಕ ವ್ಯಕ್ತಡಿಸಿದರು.
PublicNext
24/08/2022 03:12 pm