ದೊಡ್ಡಬಳ್ಳಾಪುರ: ಸಿದ್ದರಾಮಯ್ಯನವರಿಗೆ ಇವತ್ತು ಇರೋದು ಕೇವಲ ಸಿಎಂ ಕುರ್ಚಿ ಚಿಂತೆಯಷ್ಟೇ. ಅವರು ಮುಖ್ಯಮಂತ್ರಿಯಾಗಲು ನಾವು ಬಿಡಲ್ಲ, ಬಿಜೆಪಿ ಗಟ್ಟಿಯಾಗಿದೆ ಎಂದು ಸಿದ್ದರಾಮಯ್ಯ ವಿರುದ್ಧ ಸಾರಿಗೆ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು.
ದೊಡ್ಡಬಳ್ಳಾಪುರ ನಗರದ ಮುತ್ತೂರಿನಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಅವರಿಗೆ ಪ್ರಾಣಿ-ಪಕ್ಷಿ ದಾಸೋಹ ಸೇವಾ ಸಮಿತಿಯಿಂದ ಸನ್ಮಾನಿಸಲಾಯಿತು. ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು, ಪ್ರಾಣಿ-ಪಕ್ಷಿ ದಾಸೋಹ ಸೇವಾ ಸಮಿತಿಗೆ ನಾನು ಅಭಿನಂದನೆ ಸಲ್ಲಿಸುವೆ. ಇವತ್ತು ಮನುಷ್ಯರಿಗೇ ಊಟ ಹಾಕುವುದೇ ಕಷ್ಟ. ಆದರೆ, ಮುನಿರಾಜು ಅವರು ಪ್ರಾಣಿ- ಪಕ್ಷಿಗಳಿಗೆ ದಾಸೋಹ ಮಾಡುತ್ತಿದ್ದಾರೆ. ಅವರ ಸೇವೆಗೆ ನಾನು ಮೆಚ್ಚುಗೆ ವ್ಯಕ್ತಪಡಿಸುವೆ ಎಂದರು.
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರನ್ನು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ಆವತ್ತಿನ ಕಾಂಗ್ರೆಸ್ ಸರ್ಕಾರವನ್ನು 10 ಪರ್ಸೆಂಟ್ ಸರ್ಕಾರ ಎಂದು ನಾವು ಹೇಳಿದ್ವಿ. ಸಿದ್ದರಾಮಯ್ಯನವರನ್ನು ಓಲೈಸಲಷ್ಟೇ ಕೆಂಪಣ್ಣ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ.
ಬಳ್ಳಾರಿಯಲ್ಲಿ ಭಾಷಣ ಮಾಡುವ ವೇಳೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ ನಾನು ಸಹ ಖುಷಿ ಪಡುವೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಶ್ರೀರಾಮುಲು, ನಾನು ಹೇಳಿದ್ದು ಹಿಂದುಳಿದ ಸಮಾಜಗಳು ಒಂದಾಗಬೇಕು. ಹಿಂದುಳಿದ ನಾಯಕರಿಗೆ ಒಳ್ಳೆದಾಗ ಬೇಕೆಂದು ಹೇಳಿದಷ್ಟೇ. ನಾನು ರಾಜಕೀಯವಾಗಿ ಸಿದ್ದರಾಮಯ್ಯನವರನ್ನು ಓಲೈಕೆ ಮಾಡುವ ಕೆಲಸ ಮಾಡಿಲ್ಲ ಎಂದರು.
PublicNext
25/08/2022 06:30 pm