ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು:‌ ರಾಷ್ಟ್ರಗೀತೆಗೆ ಅವಮಾನ ಆರೋಪ; ಸಾಹಿತಿ ಬರಗೂರು ವಿರುದ್ಧ ಬಿಜೆಪಿ ದೂರು

ಬೆಂಗಳೂರು:‌ ರಾಷ್ಟ್ರಗೀತೆಗೆ ಸಾಹಿತಿ ಬರಗೂರು ರಾಮಚಂದ್ರಪ್ಪ ಅಪಮಾನ ಮಾಡಿದ್ದಾರೆ ಎಂದು ಅವರ ವಿರುದ್ಧ ಬಿಜೆಪಿ ದೂರು‌ ದಾಖಲಿಸಿದೆ. "ಭರತನಗರಿ" ಕಾದಂಬರಿಯಲ್ಲಿ ರಾಷ್ಟ್ರಗೀತೆಗೆ ಅವಮಾನ ಎಸಗಿದ್ದಾರೆಂಬ ಆರೋಪ ಕೇಳಿಬಂದಿದ್ದು,

ಬೆಂಗಳೂರು ಪೊಲೀಸ್ ಕಮಿಷನರ್ ಗೆ ಬಿಜೆಪಿ ನಿಯೋಗ ದೂರು ನೀಡಿದೆ‌.

ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹಾಗೂ ಛಲವಾದಿ ನಾರಾಯಣ ಸ್ವಾಮಿ ತಂಡ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರಿಗೆ ದೂರು ನೀಡಿದ್ದು, 2016ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಬರಗೂರು ರಾಮಚಂದ್ರಪ್ಪ ಪುಸ್ತಕ ಬರೆದಿದ್ದಾರೆ.

"ಭರತನಗರಿ" ಎಂಬ ಈ ಪುಸ್ತಕದಲ್ಲಿ ರಾಷ್ಟ್ರಗೀತೆಯನ್ನು ಅವಹೇಳನಕಾರಿಯಾಗಿ ಬರೆದಿದ್ದು, ತಲೆತಗ್ಗಿಸುವ ರೀತಿಯಂತಿದೆ.

ಪುಸ್ತಕದಲ್ಲಿ ರಾಷ್ಟ್ರಗೀತೆಗೆ ಅಪಮಾನ ಮಾಡಲಾಗಿದ್ದು, ಇದು‌ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಆದ ದೊಡ್ಡ ಪ್ರಮಾದ. ಸಿದ್ದರಾಮಯ್ಯ ಇದಕ್ಕೆ ಏನು ಹೇಳ್ತಾರೆ? ಎಂದು ರವಿಕುಮಾರ್ ಪ್ರಶ್ನಿಸಿದರು.

ಈ ಬಗ್ಗೆ ಪೊಲೀಸ್ ಇಲಾಖೆ ಬರಗೂರು ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕ್ರಿಮಿನಲ್ ಮೊಕದ್ದಮೆ ಹಾಕಿ, ಕಾನೂನು ಕ್ರಮ ಜರುಗಿಸಬೇಕೆಂದು ಪೊಲೀಸ್ ಕಮಿಷನರ್ ಗೆ ದೂರು ಕೊಟ್ಟಿರೋದಾಗಿ ರವಿ ಕುಮಾರ್‌ ತಿಳಿಸಿದ್ದಾರೆ.

Edited By : Nagesh Gaonkar
PublicNext

PublicNext

29/08/2022 07:04 pm

Cinque Terre

37.27 K

Cinque Terre

1

ಸಂಬಂಧಿತ ಸುದ್ದಿ