ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ವಿ.ಸೋಮಣ್ಣ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ ಸಿದ್ದರಾಮಯ್ಯ ವಿರುದ್ಧ ಪ್ರೇಸ್ ಮೀಟ್

ರಿಪೋರ್ಟ್- ರಂಜಿತಾಸುನಿಲ್.

ಬೆಂಗಳೂರು : ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯರವರು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರು, ವಸತಿ ಸಚಿವರಾದ ವಿ.ಸೋಮಣ್ಣರ ಬಗ್ಗೆ ಇಲ್ಲಸಲ್ಲದ ಅರೋಪ ಖಂಡಿಸಿ ಮತ್ತು ಶಾಸಕ ಕೃಷ್ಣಪ್ಪ, ಮಾಜಿ ಶಾಸಕ ಪ್ರಿಯಾಕೃಷ್ಣರವರು ಮಾಡಿರುವ ಅಪಾದನೆಗಳಿಗೆ ಸ್ಪಷ್ಟೀಕರಣ ನೀಡಲು ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿಂದು ಸುದ್ದಿಗೋಷ್ಠಿ ಏರ್ಪಡಿಸಿದ್ದರು.

ಈ ವೇಳೆ ಮಾತನಾಡಿದ

ಕುರುಬರ ಸಂಘದ ನಿರ್ದೇಶಕರಾದ ಟಿ.ವಿ.ಬಳಗಾವಿರವರು ವಸತಿ ಸಚಿವ ವಿ.ಸೋಮಣ್ಣ ರವರು ಸರ್ವ ಧರ್ಮ, ಜಾತಿಯನ್ನು ಸಮಾನವಾಗಿ ಕಾಣುವ ಜಾತ್ಯತೀತ ನಾಯಕರು, ಮಹಾನಗರ ಪಾಲಿಕೆ ಸದಸ್ಯರಾಗಿ ಎಲ್ಲ ಜಾತಿ ಸಮುದಾಯದವರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ.

ಕುರುಬ ಸಮುದಾಯದ ಜೆ.ಹುಚ್ಚಪ್ಪ, ಶಾಂತಕುಮಾರಿರವರು ಮಹಾಪೌರರಾಗಿ ಹುದ್ದೆ ಅಲಂಕಾರಿಸಲು ವಿ.ಸೋಮಣ್ಣರವರು ಶ್ರಮ ಸಾಧನೆ ಮಾಡಿದ್ದಾರೆ. ಸುಳ್ಳುಗಳನ್ನು ಹೇಳುವುದು, ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸವನ್ನು ಕೃಷ್ಣಪ್ಪ, ಪ್ರಿಯಾಕೃಷ್ಣ ಮಾಡುತ್ತಿದ್ದಾರೆ.

ಈ ವೇಳೆ ಮಾತನಾಡಿದ ಡಾ.ಎಸ್.ರಾಜುರವರು ವಸತಿ ಸಚಿವ ವಿ.ಸೋಮಣ್ಣರವರು ಕಳೆದ 40 ವರ್ಷಗಳ ರಾಜಕೀಯ ಜೀವನದಲ್ಲಿ ಪಾಲಿಕೆ ಸದಸ್ಯರಾಗಿ, ಶಾಸಕರಾಗಿ, ಸಚಿವರಾಗಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ. ಆದರೆ ಮೊನ್ನೆ ನಡೆದ ಕಾಂಗ್ರೆಸ್ ಪಕ್ಷದ ಸಮಾರಂಭದಲ್ಲಿ ಸಿದ್ದರಾಮಯ್ಯರವರು ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಬರಿ ಘೋಷಣೆ ಮಾಡುವ ಮೂಲಕ ಬಡವರಿಗೆ ಅನ್ಯಾಯ ಮಾಡುತ್ತಿದ್ದಾರೆ .ಪ್ರೀಯಾಕೃಷ್ಣ ಮತ್ತು ಕೃಷ್ಣಪ್ಪ ಅವರು ಸುಳ್ಳು ಹೇಳಿಕೆ ನೀಡಿ ಜನರ ದಾರಿ ತಪ್ಪಿಸುತ್ತಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

02/09/2022 06:03 pm

Cinque Terre

3.92 K

Cinque Terre

0

ಸಂಬಂಧಿತ ಸುದ್ದಿ