ಬೆಂಗಳೂರು: ಮಲ್ಲೇಶ್ವರಂ 18ನೇ ಅಡ್ಡರಸ್ತೆಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜನ್ನು 3.5 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಮತ್ತು ಕ್ಷೇತ್ರದ ಶಾಸಕ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ಎನ್ಇಪಿ ಮೂಲಕ ಪರಿಕಲ್ಪನೆ ಆಧಾರಿತ ಕಲಿಕೆ ಜಾರಿಗೆ ಬಂದಿದೆ. ಸರಕಾರಿ ಕಾಲೇಜುಗಳಲ್ಲಿ ತಂತ್ರಜ್ಞಾನ ಅಳವಡಿಕೆ ಮೂಲಕ ಶೈಕ್ಷಣಿಕ ಕ್ರಾಂತಿಯನ್ನು ನಡೆಸಲಾಗುತ್ತಿದೆ.
ಮೂರೂವರೆ ಕೋಟಿ ರೂ.ಗಳಲ್ಲಿ ಈ ಕಾಲೇಜಿಗೆ ಸುಸಜ್ಜಿತ ಸಭಾಂಗಣ, ಲಿಫ್ಟ್, ಪ್ರಯೋಗಾಲಯ, ಗ್ರಂಥಾಲಯ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗುವುದು. ವಿದ್ಯಾರ್ಥಿಗಳನ್ನು ಕೌಶಲ್ಯಾಭಿವೃದ್ಧಿ ಮೂಲಕ ಉದ್ಯಮಿಗಳನ್ನಾಗಿ ಮತ್ತು ಉದ್ಯೋಗಗಳಿಗೆ ಅರ್ಹರನ್ನಾಗಿ ಮಾಡಲಾಗುತ್ತಿದೆ. ಜತೆಗೆ ಕಾಲೇಜುಗಳಿಗೆ ಆರ್ಥಿಕ ಸ್ವಾತಂತ್ರ್ಯ ಮತ್ತು ಸ್ವಾಯತ್ತತೆ ನೀಡಲಾಗುತ್ತಿದೆ ಎಂದರು. ರಾಜ್ಯದಲ್ಲಿ 11 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ತಾಂತ್ರಿಕ ಕೌಶಲ್ಯ ಕಲಿಯುತ್ತಿದ್ದಾರೆ. ಜತೆಗೆ ಇದು ಪಠ್ಯಕ್ರಮದ ಭಾಗವಾಗಿದೆ ಎಂದರು.
PublicNext
03/09/2022 06:26 pm