ದೊಡ್ಡಬಳ್ಳಾಪುರ : ಜುಲೈ 28 ರಂದು ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ಕಾರ್ಯಕರ್ತನ ಸಾವಿನಿಂದ ಮುಂದೂಡಲಾಗಿತ್ತು. ಸದ್ಯ ಈ ಕಾರ್ಯಕ್ರಮವನ್ನು ಇದೇ ಸೆಪ್ಟೆಂಬರ್ 8 ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದ್ದು, ಸುತ್ತಮುತ್ತಲಿನ ಜಿಲ್ಲೆಗಳಿಂದ 3 ಲಕ್ಷ ಜನರನ್ನು ಸೇರಿಸುವುದಾಗಿ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ತಮ್ಮಶೆಟ್ಟಿಹಳ್ಳಿ ಗ್ರಾಮದಲ್ಲಿ ಸೆ. 8 ರಂದು ಜನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನ ನಡೆಸಲಾಗಿದೆ. ತಾಲೂಕಿನ ದೊಡ್ಡಬೆಳವಂಗಲದ ವೀರಭಧ್ರಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಡಾ ಕೆ ಸುಧಾಕರ್, ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್, ಕೋಲಾರ ಸಂಸದ ಮುನಿಸ್ವಾಮಿ.
ಜನೋತ್ಸವ ಕಾರ್ಯಕ್ರಮ ಕುರಿತು ನಡೆಸಿದ ಪತ್ರಿಕಾಗೋಷ್ಠಿ ಬಗ್ಗೆ ಮಾತನಾಡಿದ ಸಚಿವ ಡಾ ಕೆ ಸುಧಾಕರ್ ಸೆ. 8 ರಂದು ನಡೆಯುವ ಜನೋತ್ಸವಕ್ಕೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ, ತುಮಕೂರು ಹಾಗೂ ಬೆಂಗಳೂರು ನಗರದ ಕೆಲ ಕ್ಷೇತ್ರಗಳಿಂದ ಸುಮಾರು 3 ಲಕ್ಷ ಜನರು ಬರಲಿದ್ದಾರೆ, ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಒಟ್ಟು 1500 ಬಸ್ ವ್ಯವಸ್ಥೆ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾಜಿ ಸಿಎಂ ಯಡಿಯೂರಪ್ಪ, ಸಂಪುಟ ಸಹೋದ್ಯೋಗಿಗಳು ಭಾಗವಹಿಸಲಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ನಡೆಯಲಿರುವ ಜನೋತ್ಸವ ಕಾರ್ಯಕ್ರಮದ ಮೂಲಕವೇ ಚುನಾವಣೆ ಕಾವು ಏರಲಿದೆ ಎಂದು ಸಚಿವ ಸುಧಾಕರ್ ಹೇಳಿದರು.
Kshetra Samachara
04/09/2022 10:13 am