ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಜಿಲ್ಲಾ ಕೇಂದ್ರಕ್ಕಾಗಿ ಒತ್ತಾಯಿಸಿ ರಸ್ತೆ ತಡೆ; ಜನೋತ್ಸವಕ್ಕೆ ಕಪ್ಪು ಪಟ್ಟಿ ಪ್ರದರ್ಶನದ ಎಚ್ಚರಿಕೆ

ದೊಡ್ಡಬಳ್ಳಾಪುರ: ಜಿಲ್ಲಾ ಕೇಂದ್ರಕ್ಕಾಗಿ ದೊಡ್ಡಬಳ್ಳಾಪುರ ಜನರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಪ್ರತಿಭಟನಿರತರು ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಕಾರ್ಯಕ್ರಮಕ್ಕೆ ಕಪ್ಪು ಪಟ್ಟಿ ಪ್ರದರ್ಶನದ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರಕ್ಕಾಗಿ ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ನಡುವೆ ಪೈಪೋಟಿ ಇದೆ. ಇಂತಹ ಸಮಯದಲ್ಲಿ ಆಗಸ್ಟ್ 15ರಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ದೇವನಹಳ್ಳಿ ಪಟ್ಟಣವನ್ನ ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವುದ್ದಾಗಿ ಹೇಳಿದ್ದರು. ಸಚಿವರ ಈ ಒಂದು ಹೇಳಿಕೆ ದೊಡ್ಡಬಳ್ಳಾಪುರ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲಾ ಕೇಂದ್ರಕ್ಕೆ ಇರಬೇಕಾದ ಎಲ್ಲಾ ಅರ್ಹತೆ ದೊಡ್ಡಬಳ್ಳಾಪುರ ನಗರಕ್ಕೆ ಇದೆ. ದೊಡ್ಡಬಳ್ಳಾಪುರ ನಗರವನ್ನ ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ ಇಂದು ಡಿಕ್ರಾಸ್ ವೃತ್ತದಲ್ಲಿ ರಸ್ತೆ ತಡೆ ನಡೆಸಿದರು.

ಜಿಲ್ಲಾ ಕೇಂದ್ರಕ್ಕೆ ನಡೆಸುತ್ತಿರುವ ಹೋರಾಟದ ಕಾವು ಜನೋತ್ಸವಕ್ಕೆ ತಟ್ಟುವ ಸಾಧ್ಯತೆ ಇದೆ. ಸೆಪ್ಟೆಂಬರ್ 8ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕಾರಣಕ್ಕೆ ಜನೋತ್ಸವ ಕಾರ್ಯಕ್ರಮದಲ್ಲಿ ಕಪ್ಪು ಪಟ್ಟಿ ಪ್ರದರ್ಶನದ ಎಚ್ಚರಿಕೆಯನ್ನ ನೀಡಿದ್ದಾರೆ. ಹೋರಾಟಗಾರರು, ಸರ್ಕಾರದ ಪಾಲಿಗೆ ಜನೋತ್ಸವ ಆದರೆ ನಮ್ಮ ಪಾಲಿಗೆ ಅದು ಕರಾಳೋತ್ಸವ ಆಗಲಿದೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆ ತಡೆಯಿಂದ ರಾಷ್ಟ್ರೀಯ ಹೆದ್ದಾರಿ 207ರಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ಪೊಲೀಸರು ಹರಸಾಹಸಪಟ್ಟು ಟ್ರಾಫಿಕ್ ಕ್ಲಿಯರ್ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Edited By : Shivu K
PublicNext

PublicNext

05/09/2022 08:12 pm

Cinque Terre

34.86 K

Cinque Terre

0

ಸಂಬಂಧಿತ ಸುದ್ದಿ