ಬೆಂಗಳೂರು: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರೂ ಹಾಗೂ ಸಂಪುಟ ಸಹೋದ್ಯೋಗಿಯೂ ಆಗಿದ್ದ ಶ್ರೀ ಉಮೇಶ್ ಕತ್ತಿ ಅವರ ಧಿಡೀರ್ ನಿಧನದ ಸುದ್ದಿ ತಿಳಿದು, ದಿಗ್ಭ್ರಮೆಗೊಂಡಿದ್ದೇನೆ. ಕರ್ನಾಟಕ ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯರುಗಳಲ್ಲಿ ಒಬ್ಬರಾಗಿದ್ದ, ಅತ್ಯಂತ ಅನುಭವಿ ಹಾಗೂ ಉತ್ಸಾಹಿ ರಾಜಕಾರಣಿಯಾಗಿದ್ದ ಹಾಗೂ ಉತ್ತರ ಕರ್ನಾಟಕ ಭಾಗದ ಜನತೆಯ ದ್ವನಿಯಾಗಿದ್ದ ಉಮೇಶ್ ಕತ್ತಿಯವರ ನಿಧನದಿಂದ ರಾಜ್ಯಕ್ಕೆ ಅದರಲ್ಲಿಯೂ ವಿಶೇಷವಾಗಿ, ಉತ್ತರ ಕರ್ನಾಟಕ ಭಾಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.
ದಿವಂಗತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ, ಎಂದು ಪ್ರಾರ್ಥಿಸುತ್ತೇನೆ ಎಂದು ಆರಗ ಜ್ಞಾನೇಂದ್ರ ಸಂತಾಪ ಸೂಚಿಸಿದ್ದಾರೆ.
Kshetra Samachara
07/09/2022 01:12 pm