ದೊಡ್ಡಬಳ್ಳಾಪುರ: ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮ ಮುಂದೂಡುವ ಸಾಧ್ಯತೆ ಇದೆ, ಕಳೆದ ರಾತ್ರಿ ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆ ರಾಜ್ಯದಲ್ಲಿ ಶೋಕಾಚರಣೆ ಇರುವುದರಿಂದ ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ ಸಾಧ್ಯತೆ ಹೆಚ್ಚಿದೆ.
ರಾಜ್ಯ ಬಿಜೆಪಿ ಸರ್ಕಾರ 3 ವರ್ಷ ಮತ್ತು ಬೊಮ್ಮಾಯಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನಲೆ ಸರ್ಕಾರದ ಸಾಧನೆಗಳನ್ನ ಜನರಿಗೆ ತಿಳಿಸಲು ಜನೋತ್ಸವ ಕಾರ್ಯಕ್ರಮವನ್ನ ದೊಡ್ಡಬಳ್ಳಾಪುರದಲ್ಲಿ ಅಯೋಜನೆ ಮಾಡಿತು. ಜುಲೈ 28 ರಂದು ದೊಡ್ಡಬಳ್ಳಾಪುರದ ತಮ್ಮಶೆಟ್ಟಿಹಳ್ಳಿಯಲ್ಲಿ ಬೃಹತ್ ಜನೋತ್ಸವ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಲಾಗಿತು, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಿಂದ ಕಾರ್ಯಕರ್ತರ ಪ್ರತಿಭಟನೆಯಿಂದ ಜನೋತ್ಸವ ಕಾರ್ಯಕ್ರಮ ಮುಂದೂಡಲಾಗಿತ್ತು, ಆಗಸ್ಟ್ 28 ರಂದು ಜನೋತ್ಸವ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಲಾಗಿತು, ಗಣೇಶೋತ್ಸವದ ಹಿನ್ನಲೆ ಎರಡನೇ ಭಾರಿ ಮುಂದೂಡಲಾಗಿತು,
ಅಂತಿಮವಾಗಿ ಸೆಪ್ಟೆಂಬರ್ 8 ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ, ಆದರೆ ಕಳೆದ ರಾತ್ರಿ ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ, ಸಚಿವರ ಸಾವಿನಿಂದ ರಾಜ್ಯದಲ್ಲಿ ಒಂದು ದಿನದ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ, ಈ ಪರಿಸ್ಥಿತಿಯಲ್ಲಿ ಸರ್ಕಾರ ನಾಳೆ ಜನೋತ್ಸವ ಕಾರ್ಯಕ್ರಮ ಮಾಡುವುದಾ ಎಂಬ ದೊಡ್ಡ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ. ಭಾರಿ ಮಳೆಯಿಂದಾಗಿ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ಹಲವು ಕಡೇ ಬೆಳೆಹಾನಿಯಾಗಿದೆ, ಮನೆ ಕಳೆದುಕೊಂಡು ಜನರು ನಿರಾಶ್ರಿತರಾಗಿದ್ದಾರೆ ಇಂತಹ ಸಮಯದಲ್ಲಿ ಸರ್ಕಾರಕ್ಕೆ ಉತ್ಸಾಹ ಬೇಕಾ ಎಂಬ ಕೂಗು ಸಹ ಕೇಳಿ ಬಂದಿದೆ.
PublicNext
07/09/2022 02:43 pm