ಬೆಂಗಳೂರು- ಜನಸ್ಪಂದನ ಕಾರ್ಯಕ್ರಮದಿಂದ ನಗರದಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿದೆ. ಬಿ.ಬಿ ರಸ್ತೆಯುದ್ದಕ್ಕೂ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಆಗಿದೆ. ದೊಡ್ಡಬಳ್ಳಾಪುರದಲ್ಲಿ ಬೃಹತ್ ಜನಸ್ಪಂದನಾ ಕಾರ್ಯಕ್ರಮ ಆರೋಗ್ಯ ಸಚಿವರ ಸುಧಾಕರ್ ನೇತೃತ್ವದಲ್ಲಿ ನಡೆಯುತ್ತಿದೆ.
ಮುಂಜಾನೆಯಿಂದಲೂ ನಗರದಲ್ಲಿ ಟ್ರಾಫಿಕ್ ಜಾಮ್ ಹೆಚ್ಚಿದೆ. ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಟ್ರಾಫಿಕ್ ಜಾಮ್‌ನಿಂದ ಪರದಾಡುವಂತಾಗಿದೆ. ಹೂವಿನ ವ್ಯಾಪಾರಸ್ಥರಿಗೆ ನಿಲ್ಲದ ಸಂಕಷ್ಟವಾಗಿದೆ. ಟ್ರಾಫಿಕ್ ಸಮಸ್ಯೆಯಿಂದ ವಾಹನಸವಾರರಂತೂ ಬೇಸತ್ತಿದ್ದಾರೆ. ಇತ್ತ ಪೊಲೀಸ್ ಇಲಾಖೆಯವರಂತೂ ಟ್ರಾಫಿಕ್ ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ.
PublicNext
10/09/2022 11:36 am