ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮತದಾರರ ಕ್ಷೇತ್ರ ಅದಲುಬದಲು!; ಅಧಿಕಾರಿಗಳ ಎಡವಟ್ಟಿಗೆ ಶಾಸಕ ಸತೀಶ್ ರೆಡ್ಡಿ ಆಕ್ರೋಶ

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳು ಮತ್ತು ಚುನಾವಣಾ ಆಯೋಗದ ವಿರುದ್ದ ವಿಧಾನಸಭೆ ಮುಖ್ಯ ಸಚೇತಕ, ಶಾಸಕ ಸತೀಶ್ ರೆಡ್ಡಿ ಕೆಂಡಾಮಂಡಲರಾಗಿದ್ದಾರೆ. ಇದಕ್ಕೆಲ್ಲ ಕಾರಣ ಬಿಬಿಎಂಪಿ ಅಧಿಕಾರಿಗಳು ಮಾಡಿದ ಎಡವಟ್ಟು!

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 7500 ಮತದಾರರು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಪಟ್ಟಿಯಲ್ಲಿ ಪ್ರತ್ಯಕ್ಷರಾಗಿದ್ದರು. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಮತದಾರರು ಬಿಬಿಎಂಪಿ ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ಬೆಂಗಳೂರು ದಕ್ಷಿಣ ಮತದಾರರ ಪಟ್ಟಿಯಲ್ಲಿ ಕಂಡು ಬಂದಿದ್ದಾರೆ ಎಂದು ಬೊಮ್ಮನಹಳ್ಳಿ ಶಾಸಕರೂ ಆದ ಸತೀಶ ರೆಡ್ಡಿ ಬಿಬಿಎಂಪಿ ಹಾಗೂ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಹುಳಿಮಾವು ಸಮೀಪದ ಸಾಯಿ ಲೇಔಟ್, ಅಕ್ಷಯಾ ಗಾರ್ಡನ್, ಹಿರಾನಂದಾನಿ ಅಪಾರ್ಟ್‌ ಮೆಂಟ್, ಸಾಯಿ‌ನಗರ ಭಾಗದ ಮತದಾರರು ಬೆಂಗಳೂರು ದಕ್ಷಿಣ ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಇಂದು ಬೊಮ್ಮನಹಳ್ಳಿಯ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಶಾಸಕ ಸತೀಶ್ ರೆಡ್ಡಿ, ಬಿಬಿಎಂಪಿ ಅಧಿಕಾರಿಗಳು ಮಾಡಿರುವ ಎಡವಟ್ಟಿನ ಬಗ್ಗೆ ಮಾತನಾಡಿದರು.

ನವೀನ್, ಪಬ್ಲಿಕ್ ನೆಕ್ಸ್ಟ್ ಬೆಂಗಳೂರು

Edited By : Manjunath H D
PublicNext

PublicNext

11/09/2022 07:59 am

Cinque Terre

32 K

Cinque Terre

0

ಸಂಬಂಧಿತ ಸುದ್ದಿ