ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು:ಶ್ರೀನಾರಾಯಣಗುರುಗಳ ಆದರ್ಶ, ವಿಚಾರಧಾರೆಗಳು ಇಂದಿಗೂ ಪ್ರಸ್ತುತ: ನಾರಾಯಣಗೌಡ

ಬೆಂಗಳೂರು:ನಾರಾಯಣಗುರುಗಳು ಒಂದು ಜಾತಿ, ಒಂದು ಧರ್ಮಕ್ಕೆ ಸೀಮಿತರಲ್ಲ. ಬಡವರು ಶೋಷಿತರ ಪರವಾಗಿ ನಿಂತು ಶ್ರಮಿಸಿದವರು. ಗುರುಗಳ ವಿಚಾರಧಾರೆ ಇಂದಿಗೂ ಪ್ರಸ್ತುತವಾಗಿವೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಸ್ಮರಿಸಿದರು.

ಬಿಲ್ಲವ ಅಸೋಸಿಯೇಷನ್ ಬೆಂಗಳೂರು ವತಿಯಿಂದ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರುಗಳ 168ನೇ ಜಯಂತೋತ್ಸವದಲ್ಲಿ ಪಾಲ್ಗೊಂಡಿದ್ದ ಸಚಿವ ಡಾ.ನಾರಾಯಣಗೌಡ ಅವರು, ಬಿಲ್ಲವ ಅಸೋಸಿಯೇಷನ್ ಗೂ ನನಗೂ ಅವಿನಾಭಾವ ಸಂಬಂಧವಿದೆ. 30-35 ವರ್ಷಗಳಿಂದ ಬಿಲ್ಲವ ಅಸೋಸಿಯೇಷನ್ ಜೊತೆ ನನ್ನ ಸಂಬಂಧ ಇದೆ‌ ಎಂದು ಬಿಲ್ಲವರ ಜೊತೆಗಿನ ಸಂಬಂಧವನ್ನು ಮೆಲುಕು ಹಾಕಿದರು.

ಕರ್ನಾಟಕ ಆರ್ಯ ಈಡಿಗರ ಸಂಘದ ಅಧ್ಯಕ್ಷ ತಿಮ್ಮೇಗೌಡ, ಬಿಲ್ಲವ ಅಸೋಸಿಯೇಷನ್ ಅಧ್ಯಕ್ಷ ವೇದಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

11/09/2022 03:22 pm

Cinque Terre

1.13 K

Cinque Terre

0

ಸಂಬಂಧಿತ ಸುದ್ದಿ