ಬೆಂಗಳೂರು: ಬೆಟರ್ ಬೆಂಗಳೂರು ಕ್ರಿಯಾ ಯೋಜನೆ ಸಮಿತಿ’ಯನ್ನು ರಚಿಸಿದ್ದಾರೆ, ಇದು ರಾಜಧಾನಿಯಲ್ಲಿ ಮೂಲಸೌಕರ್ಯಗಳನ್ನು ಸುಧಾರಿಸಲು ವಿವಿಧ ಸ್ಟೇಕ್ ಹೋಲ್ಡರ್ಗಳೊಂದಿಗೆ ಸಮಾಲೋಚನೆ ನಡೆಸಿ ಇಪ್ಪತ್ತು ದಿನಗಳಲ್ಲಿ ವರದಿ ಸಲ್ಲಿಸಲಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿದ್ದು, ರಾಜ್ಯಸಭಾ ಮಾಜಿ ಸಂಸದ ರಾಜೀವ್ ಗೌಡ ಸಂಚಾಲಕರಾಗಿ ಮಾಜಿ ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್, ಮಾಜಿ ಸಚಿವರಾದ ಕೆ ಜೆ ಜಾರ್ಜ್ ಮತ್ತು ಕೃಷ್ಣಬೈರೇಗೌಡ ಹಾಗೂ ಶಾಸಕರಾದ ಎನ್ ಎ ಹ್ಯಾರಿಸ್ ಮತ್ತು ರಿಜ್ವಾನ್ ಅರ್ಷದ್ ಅವರು ಸದಸ್ಯರಾಗಿದ್ದಾರೆ. ಬೆಂಗಳೂರಿನ ಇಬ್ಬರು ಮಾಜಿ ಮೇಯರ್ಗಳಾದ ಪದ್ಮಾವತಿ ಮತ್ತು ಗಂಗಾಂಬಿಕೆ ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.
ಈ ಹಿಂದೆ ಜನರಿಗೆ ನೀಡಿದ ಭರವಸೆಯಂತೆ ನಮ್ಮ ಬೆಂಗಳೂರಿನ ಹಿರಿಮೆಯನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ಶ್ರೀ ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ 'ಬೆಟರ್ ಬೆಂಗಳೂರು' ಎನ್ನುವ ಕ್ರಿಯಾ ಸಮಿತಿಯನ್ನು ರಚಿಸಿದ್ದೇನೆ. ಈ ಸಮಿತಿಯು 20 ದಿನಗಳೊಳಗೆ ವರದಿಯನ್ನು ನೀಡಲಿದೆ. ಇದರ ಆಧಾರದ ಮೇಲೆ ಅಧಿಕಾರಕ್ಕೆ ಬಂದ ತಕ್ಷಣ ಕಾರ್ಯಗತಗೊಳ್ಳುವ ದೂರದೃಷ್ಟಿಯ ಯೋಜನೆ ರೂಪಿಸುತ್ತೇವೆ ಎಂದು ಶಿವಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.ಇನ್ನು ಕೆಲವೇ ತಿಂಗಳಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಲಿದ್ದು, ಸಮಿತಿ ನೀಡಿರುವ ಶಿಫಾರಸುಗಳನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಅವರು ಹೇಳಿದ್ದಾರೆ.
ಈ ಸಮಿತಿಯು ಬೆಂಗಳೂರಿನ ನಿವಾಸಿಗಳು, ಸಿವಿಲ್ ಇಂಜಿನಿಯರ್ಗಳು, ರಿಯಲ್ ಎಸ್ಟೇಟ್ ಡೆವಲಪರ್ಗಳು, ಪರಿಸರ ಕಾರ್ಯಕರ್ತರು ಸೇರಿದಂತೆ ಇತರರೊಂದಿಗೆ ಸಮಾಲೋಚನೆ ನಡೆಸಲಿದ್ದು, ಈ ವರ್ಷ ಬೆಂಗಳೂರಿನಲ್ಲಿ ಭಾರಿ ಪ್ರವಾಹಕ್ಕೆ ಕಾರಣವಾದ ಪ್ರಾಥಮಿಕ ಕಾರಣಗಳನ್ನು ಪತ್ತೆ ಮಾಡುತ್ತದೆ. ತಜ್ಞರು ನೀಡಿದ ಸಲಹೆಗಳ ಆಧಾರದ ಮೇಲೆ ಸಮಿತಿಯು ತನ್ನ ವರದಿ ಮತ್ತು ಶಿಫಾರಸುಗಳನ್ನು ಸಿದ್ಧಪಡಿಸುತ್ತದೆ ಮತ್ತು ಪಕ್ಷದ ನಾಯಕರೊಂದಿಗೆ ಹಂಚಿಕೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
Kshetra Samachara
11/09/2022 09:10 pm