ಬೆಂಗಳೂರು: ಮಾಜಿ ಸಚಿವ ಆರ್.ವಿ ದೇಶಪಾಂಡೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಅಸಮಾಧಾನ ಹೊರಹಾಕ್ತಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ಇದೇ ವಿಷಯವಾಗಿ ಮಾತನಾಡಿದ ಆರ್.ವಿ ದೇಶಪಾಂಡೆ, ಅಧ್ಯಕ್ಷರು ಬಹಳ ಪ್ರೀತಿ ವಿಶ್ವಾಸದಲ್ಲಿದ್ದಾರೆ. ಎಲ್ಲರ ಸಹಕಾರದಿಂದ ಅವರು ಕೆಲಸ ಮಾಡ್ತಿದ್ದಾರೆ. ಯಾವುದೇ ಊಹಾಪೋಹಗಳು ಇಲ್ಲ. ಅವರ ಉದ್ದೇಶ ಭಾರತ್ ಜೋಡೋ ಯಶಸ್ವಿಯಾಗಬೇಕು ಅಂತ. ಹೀಗಾಗಿ ಎಲ್ಲ ಕಡೆಯಿಂದ ನಮ್ಮ ಮುಖಂಡರು, ಕಾರ್ಯಕರ್ತರು ಬರಬೇಕು ಯಶಸ್ವಿಯಾಗಬೇಕು ಎಂದು ಹೇಳಿದ್ದಾರೆ.
ಇನ್ನು ಅವರ ಹೇಳಿಕೆಗಳಿಗೆ ಬೇರೆ ಅರ್ಥ ಕಲ್ಸಿಸೋದು ಬೇಡ. ಒಳ್ಳೇ ಉದ್ದೇಶದಿಂದ ಅವರು ಹೇಳಿಕೆ ಕೊಟ್ಟಿರಬಹುದು. ಎಲ್ಲರೂ ಒಗ್ಗಟ್ಟಿನಿಂದ ಹೋಗಬೇಕು. ರಾಜ್ಯದಲ್ಲಿ ನಮ್ಮ ಸರ್ಕಾರ ಬರಬೇಕು. ಆ ನಿಟ್ಟಿನಲ್ಲಿ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ, ಹೆಚ್.ಕೆ ಪಾಟೀಲ್ ಸೇರಿ ಎಲ್ಲರೂ ಒಟ್ಟಾಗಿ ಸೇರಿ ಚುನಾವಣೆಗೆ ಹೋಗಬೇಕು. ಯಾವುದೇ ಭಿನ್ನಾಭಿಪ್ರಾಯ ಇದ್ದರೂ ಮರೆತು ಒಗ್ಗಟ್ಟಾಗಿ ಚುನಾವಣೆಗೆ ಹೋಗಬೇಕೆಂದು ಆರ್ ವಿ ದೇಶಪಾಂಡೆ ಹೇಳಿದ್ದಾರೆ.
PublicNext
18/09/2022 03:45 pm