ಚಾಮರಾಜನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚಾಮರಾಜನಗರದ ಗುಂಡ್ಲುಪೇಟೆಯಿಂದ 'ಭಾರತ್ ಜೋಡೋ ಯಾತ್ರೆ' ಆರಂಭಿಸಲಿದ್ದಾರೆ. ರಾಹುಲ್ ಗಾಂಧಿ ಅವರನ್ನು ರಾಜ್ಯ ನಾಯಕರೇ ದಂಡೆ ಕೆಕ್ಕನಹಳ್ಳ ಚೆಕ್ ಪೋಸ್ಟ್‌ಗೆ ತೆರಳಿ ಸ್ವಾಗತಿಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಆರ್.ವಿ.ದೇಶಪಾಂಡೆ, ವೀರಪ್ಪ ಮೊಯಿಲಿ, ಕೆ.ಜೆ.ಜಾರ್ಜ್ ಸೇರಿದಂತೆ ಹತ್ತಾರು ನಾಯಕರುಗಳು ಭಾಗಿಯಾಗಿದ್ದಾರೆ.
ಗುಂಡ್ಲುಪೇಟೆ ಪಟ್ಟಣದ ಅಂಬೇಡ್ಕರ್ ಭವನದ ಎದುರು ಬೃಹತ್ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಜನರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ. ಇದಾದ ಬಳಿಕ, ಪಾದಯಾತ್ರೆ ಆರಂಭಿಸಲಿದ್ದಾರೆ. ನಂತರ ಸೋಲಿಗರು ಹಾಗೂ ಕಳೆದ ವರ್ಷ ಆಕ್ಸಿಜನ್ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರ ಜೊತೆ ಸಂವಾದ ನಡೆಸಲಿದ್ದಾರೆ.
PublicNext
30/09/2022 03:39 pm