ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೊಮ್ಮನಹಳ್ಳಿ: ಜನಸ್ಪಂದನಾ ಕಾರ್ಯಕ್ರಮ

ಬೊಮ್ಮನಹಳ್ಳಿ: ಬಿಬಿಎಂಪಿ ವಾರ್ಡ್ ಗಳಲ್ಲಿ ಕಂಡುಬರುವ ಸಾರ್ವಜನಿಕರ ಕುಂದುಕೊರತೆಗಳನ್ನು ಬಗೆಹರಿಸುವ ಸಲುವಾಗಿ ಜನಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಚಾಲನೆ ನೀಡಿದರು.

ಇಂದು ಪುಟ್ಟೇನಹಳ್ಳಿ ವಾರ್ಡ್-187 ರ ಗಣೇಶ ದೇವಸ್ಥಾನದ ಮೈದಾನದಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದರು ಇನ್ನು ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಲಾಯಿತು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳಿಗೆ ಶೀಘ್ರವಾಗಿ ಪರಿಹಾರ ಒದಗಿಸಲು ಸೂಚನೆ ನೀಡಲಾಯಿತು.

ಈ ಸಂದರ್ಭದಲ್ಲಿ ಬಿಬಿಎಂಪಿ ಸದಸ್ಯರುಗಳು,ಬಿಬಿಎಂಪಿ,ಪೋಲಿಸ್,ಆರೋಗ್ಯ, ಬೆಸ್ಕಾಂ,ಬಿ.ಡಬ್ಲ್ಯೂ. ಎಸ್.ಎಸ್‌. ಬಿ ಎಲ್ಲಾ ಇಲಾಖೆಯು ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

26/03/2022 05:58 pm

Cinque Terre

596

Cinque Terre

0

ಸಂಬಂಧಿತ ಸುದ್ದಿ