ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಫಸಲ್ ಭೀಮಾ ಬೆಳೆವಿಮೆ ಯೋಜನೆ ಮಾನದಂಡ ಬದಲಾಯಿಸ ಬೇಕು: ಕುರುಬೂರು ಶಾಂತಕುಮಾರ್..!

ಬೆಂಗಳೂರು: ಆಗಸ್ಟ್ 22 ರಂದು ದೆಹಲಿ ಜಂತರ್ ಮಂತರ್ ನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಬೃಹತ್ ರೈತರ ರ್‍ಯಾಲಿ ನಡೆದಿದೆ. ಕರ್ನಾಟಕ, ತಮಿಳುನಾಡು ಕೇರಳ ರಾಜ್ಯಗಳಿಂದ ನೂರಾರು ರೈತರು ಹೋರಾಟದಲ್ಲಿ ಭಾಗಿಗಳಾಗಿದ್ದಾರೆ ಕರ್ನಾಟಕ ರಾಜ್ಯದ ನಾರಾಯಣ ರೆಡ್ಡಿ, ಕೇರಳ ರಾಜ್ಯದ ಕೆ ವಿ ಬಿಜು, ತಮಿಳುನಾಡಿನ ಥಾಮಸ್, ಮಧ್ಯಪ್ರದೇಶದ ಶಿವಕುಮಾರ್ ಕಕ್ಕ ಪಂಜಾಬಿನ ದಲ್ಜಿಟ್ ಸಿಂಗ್ ದಲೈವಾಲ, ಅಭಿಮನ್ಯು ಕೋಹರ್, ಇನ್ನು ಮುಂತಾದ ಮುಖಂಡರು ನೇತೃತ್ವ ವಹಿಸಿದರು.

ಎಲ್ಲಾ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ MSP ಕಾತರಿ ಕಾನೂನು ಜಾರಿಗೆ ತರಬೇಕು,

ಡಾ ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ನಿಗದಿಯಾಗಬೇಕು

2022ರ ವಿದ್ಯುತ್ ಕಾಯ್ದೆ ಖಾಸಗಿಕರಣ ತಿದ್ದುಪಡಿ ಕೈಬಿಡಬೇಕು

ಕಬ್ಬಿನ ಎಫ್ ಆರ್ ಪಿ ದರ ಪುನರ್ ಪರಿಶೀಲನೆ ನಡೆಸಿ

ವೈಜ್ಞಾನಿಕವಾಗಿ ನಿಗದಿ ಮಾಡಬೇಕು

ಕೃಷಿ ಉತ್ಪನ್ನಗಳ, ಹಾಗೂ ಉಪಕರಣಗಳ ಮೇಲಿನ ಜಿ ಎಸ್ಟಿ ರದ್ದುಪಡಿಸ ಬೇಕು

ದೇಶದಲ್ಲಿ ಮೂರುವರೆ ಲಕ್ಷ ರೈತರು ಕೃಷಿ ಸಂಕಷ್ಟದಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಹಾಗೂ ಕರೋನ ಲಾಕ್ಡೌನ್ ಸಂಕಷ್ಟದಿಂದ ನಲುಗಿದ್ದಾರೆ ಆದಕಾರಣ ದೇಶದ ಉದ್ಯಮಿಗಳ 10 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ರೀತಿಯಲ್ಲಿ, ರೈತರ ಸಾಲ ಮನ್ನಾ

ಮಾಡ ಬೇಕು. ವಿಶ್ವವ್ಯಾಪಾರ ಒಪ್ಪಂದ ಡಬ್ಲ್ಯುಟಿಒ ನಿಂದ ಭಾರತ ಸರ್ಕಾರ ಹೊರಬರ ಬೇಕು. ಲಕ್ಷ್ಮಿಪುರ ಕೇರಿ ಪ್ರಕರಣದಲ್ಲಿ ಭಾಗಿಯಾಗಿರುವ ಕೇಂದ್ರದ ರಾಜ್ಯ ಗೃಹ ಸಚಿವ ಅಜಯ್ ಕುಮಾರ್ ಮಿಶ್ರಾ ಸಂಪುಟದಿಂದ ಕೈಬಿಡಬೇಕು. ದೆಹಲಿ ಹೋರಾಟದಲ್ಲಿ ಮಾಡಿದ 750 ರೈತ ಕುಟುಂಬಗಳಿಗ ಕೇಂದ್ರ ಸರ್ಕಾರ ನವಂಬರ್ ತಿಂಗಳಲ್ಲಿ ಮೂರು ಕೃಷಿ ಕಾಯ್ದೆ ರದ್ದು ಮಾಡಿದಾಗ ನೀಡಿದ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಭರವಸೆ ಈಡೇರಿಸಬೇಕು.

Edited By : PublicNext Desk
Kshetra Samachara

Kshetra Samachara

22/08/2022 07:59 pm

Cinque Terre

788

Cinque Terre

0

ಸಂಬಂಧಿತ ಸುದ್ದಿ