ದೊಡ್ಡಬಳ್ಳಾಪುರ: ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಇಂದು ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು, 64 ಲಕ್ಷ ಹಣ ಸಂಗ್ರಹವಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ಇಂದು ದೇವರ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಯನ್ನು ಎಣಿಕೆ ಮಾಡಲಾಯಿತು. ಹುಂಡಿ ಎಣಿಕೆಯಲ್ಲಿ ಒಟ್ಟು 64,66,752 ರೂಪಾಯಿ ಹಣ ಸಂಗ್ರಹವಾಗಿದೆ.
ಇದರೊಂದಿಗೆ ರೂ 77,500 ಮೌಲ್ಯದ 2 ಕೆಜಿ 200 ಗ್ರಾಂ ಬೆಳ್ಳಿ, 66,300ರೂ ಮೌಲ್ಯದ 01 ಗ್ರಾಂ 500 ಮಿಲಿ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.
ಮುಜರಾಯಿ ಇಲಾಖೆ ಸಹಾಯಕ ಆಯುಕ್ತೆ ಜಿ.ಜೆ.ಹೇಮಾವತಿ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಡಿ.ನಾಗಾರಾಜ್, ಪ್ರಧಾನ ಅರ್ಚಕ ಎಸ್.ಎನ್.ಸುಬ್ಬಕೃಷ್ಣಶಾಸ್ತ್ರೀ, ದೇವಾಲಯದ ಸೂಪರ್ ಡೆಂಟ್ ರಘು ಹುಚ್ಚಪ್ಪ ಸೇರಿದಂತೆ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್, ದೇವಸ್ಥಾನದ ಸಿಬ್ಬಂದಿ ವರ್ಗ ಹಾಗೂ ಭಕ್ತಾರ ಸಮ್ಮುಖದಲ್ಲಿ ಹುಂಡಿ ಹಣ ಎಣಿಸಲಾಯಿತು.
Kshetra Samachara
18/04/2022 09:42 pm