ಭಾರತ: ಭಾರತದಲ್ಲಿ ಮಕ್ಕಳ ಮೇಲೆ ನಡೆದಿರುವ ಸೈಬರ್ ಅಪರಾಧ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯ ಎರಡನೇ ಸ್ಥಾನದಲ್ಲಿದೆ.. ಮಕ್ಕಳ ವಿರುದ್ಧದ ಸೈಬರ್ ಅಪರಾಧಗಳನ್ನು ವರದಿ ಮಾಡುವ ಪ್ರಮುಖ ಐದು ರಾಜ್ಯಗಳಲ್ಲಿ ಉತ್ತರ ಪ್ರದೇಶ (170) ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ (144), ಮಹಾರಾಷ್ಟ್ರ (137), ಕೇರಳ (107) ಮತ್ತು ಒಡಿಶಾ (71) ರಾಜ್ಯಗಳು ನಂತರದ ಸ್ಥಾನದಲ್ಲಿವೆ..
2019ಕ್ಕೆ ಹೋಲಿಸಿದರೆ 2020 ರಲ್ಲಿ ಮಕ್ಕಳ ಮೇಲಿನ ಸೈಬರ್ ಅಪರಾಧ ಪ್ರಕರಣಗಳಲ್ಲಿ 400 ಪ್ರತಿಶತದಷ್ಟು ಹೆಚ್ಚಳವಾಗಿರುವ ಬಗ್ಗೆ ರಾಷ್ಟ್ರೀಯ ಅಪರಾಧಗಳ ದಾಖಲೆಯ ಬ್ಯೂರೋ (NCRB) ವರದಿ ಮಾಡಿದೆ.. ಎನ್‌ಸಿಆರ್‌ಬಿ 2020 ರ ಅಂಕಿಅಂಶಗಳು ಬಹಿರಂಗಪಡಿಸುವಂತೆ, ಕಳೆದ ವರ್ಷಕ್ಕೆ ಹೋಲಿಸಿದರೆ ಮಕ್ಕಳ ವಿರುದ್ಧದ ಸೈಬರ್ ಅಪರಾಧಗಳಲ್ಲಿ (ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ನೋಂದಾಯಿಸಲಾಗಿದೆ) ತೀವ್ರ ಏರಿಕೆ (ಶೇಕಡಾ 400 ಕ್ಕಿಂತ ಹೆಚ್ಚು) ಕಂಡುಬಂದಿದ್ದು, ಮಕ್ಕಳನ್ನು ಲೈಂಗಿಕವಾಗಿ ಅಶ್ಲೀಲವಾಗಿ ಚಿತ್ರಿಸುವ ವಸ್ತುಗಳನ್ನು ಪ್ರಕಟಿಸಲು ಅಥವಾ ರವಾನಿಸಲು ಸಂಬಂಧಿಸಿದಂತಹ 738 ಪ್ರಕರಣಗಳು ಕಂಡುಬಂದಿರುವಂತಹ ಆಘಾತಕಾರಿ ಮಾಹಿತಿಯನ್ನು ಹೊರಹಾಕಿದೆ.
Kshetra Samachara
28/05/2022 05:45 pm