ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದ ಕರಾವಳಿ ಸೇರಿದಂತೆ ನಾಲ್ಕು ದಿನ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ...

ಬೆಂಗಳೂರು; ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆ ಆರಂಭವಾಗಿದ್ದು, ಇಂದೂ ಸೇರಿದಂತೆ ನಾಲ್ಕು ದಿನ ಕರಾವಳಿ ಸೇರಿ ಹಲವೆಡೆ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 16ರಿಂದ 18ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಹೇಳಿದೆ. ದಕ್ಷಿಣ ಒಳನಾಡಿನಲ್ಲಿ ಗುರುವಾರದಿಂದ ಮಳೆ ಹೆಚ್ಚಾಗಲಿದ್ದು, ಉತ್ತರ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.

ಯಾವ ಯಾವ ಜಿಲ್ಲೆಗಳಲ್ಲಿ ಮಳೆ:

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ ಮತ್ತಿತರ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

Edited By : PublicNext Desk
Kshetra Samachara

Kshetra Samachara

16/06/2022 08:11 pm

Cinque Terre

518

Cinque Terre

0

ಸಂಬಂಧಿತ ಸುದ್ದಿ