ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಿವೃತ್ತ ನ್ಯಾ. ನಾಗಮೋಹನದಾಸ್ ಆಯೋಗದ ವರದಿ ‌ಅನುಷ್ಟಾನಕ್ಕೆ ಒತ್ತಾಯ

ದೊಡ್ಡಬಳ್ಳಾಪುರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮಿಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜುಲೈ 11 ರಂದು ಧರಣಿ ನಡೆಸಲು ಮುಂದಾಗಿವೆ.

ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಹಾಗೂ ಉದ್ಯೋಗ ಮೀಸಲಾತಿ ಕಲ್ಪಿಸುವ ನಿವೃತ್ತ ನ್ಯಾ. ನಾಗಮೋಹನದಾಸ್ ಆಯೋಗದ ವರದಿ ‌ಅನುಷ್ಟಾನಕ್ಕೆ ಒತ್ತಾಯಿಸಿ ಜುಲೈ11 ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸ್ವಾಭಿಮಾನಿ ಎಸ್ಸಿ/ಎಸ್ಟಿ ಸಂಘಟನೆಗಳ ಒಕ್ಕೂಟ ಹಾಗೂ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾಸಮಿತಿಯ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸಸ್ವಾಮಿ ತಿಳಿಸಿದರು.

ನಾಗಮೋಹನದಾಸ್ ವರದಿಯಂತೆ ಪರಿಶಿಷ್ಟ ಜಾತಿಗೆ ನೀಡುತ್ತಿರುವ ಮೀಸಲಾತಿಯನ್ನು ಶೇ 15 ರಿಂದ 17ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 3ರಿಂದ 7ಕ್ಕೆ ಹೆಚ್ಚಿಸಬೇಕು. ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ವಾಲ್ಮಿಕಿ‌ ಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರು ಕಳೆದ ಐದು ತಿಂಗಳಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಆದರೆ, ಸರ್ಕಾರದಿಂದ ಈವರೆಗು ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ದೂರಿದರು.

ಮೇ 20 ರಂದು ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ದಲಿತ ಸಂಘಟನೆಗಳು ರಾಜ್ಯದ‌ ಎಲ್ಲ ತಾಲೂಕು ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿದರೂ ಯಾವುದೇ ಕ್ರಮ‌ಕೈಗೊಂಡಿಲ್ಲ. ವರದಿ ಜಾರಿಗೊಳಿಸಲು ಸರ್ಕಾರ ಇಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ. ಈ ನಿಟ್ಟಿನಲ್ಲಿ ಸರ್ಕಾರದ ವಿರುದ್ದ ನಿರ್ಣಾಯಕ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಹೋರಾಟ ಸಮಿತಿ ಮುಖಂಡರು ಬೀಡಿಕೆರೆ ಸುಭ್ರಮಣಿ,ಮುತ್ಸಂದ್ರ ಓಬಳೇಶ್, ನಂದಿಗುಂದಿ ಪಿ.ವೆಂಕಟೇಶ್, ಹೊಸಕೋಟೆ ರಮೇಶ್, ರಾಧ, ದೇವರಾಜಮ್ಮ, ಗುರುರಾಜಪ್ಪ, ಬಷೀಶ್ ತ್ಯಾಗರಾಜ್ ಸೇರಿದಂತೆ ಇರೆ ಮುಖಂಡರು ಇದ್ದರು.

Edited By : PublicNext Desk
Kshetra Samachara

Kshetra Samachara

08/07/2022 08:42 pm

Cinque Terre

3.9 K

Cinque Terre

0

ಸಂಬಂಧಿತ ಸುದ್ದಿ