ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಟಿಎಂಸಿ ಬ್ಯಾಂಕ್ ನಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ

ದೊಡ್ಡಬಳ್ಳಾಪುರ: ಮುಂದಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ನೀಡಲಾಗುವುದು ಎಂದು ದಿ ಟೆಕ್ಸ್ ಟೈಲ್ ಮ್ಯಾನುಫ್ಯಾಕ್ಚರರ್ಸ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ.ಪಿ.ವಾಸುದೇವ್ ತಿಳಿಸಿದರು.

ಗಾಂಧಿನಗರದ ಬ್ಯಾಂಕ್ ಆವರಣದಲ್ಲಿರುವ ಕೆ.ಸಿ.ಪುಟ್ಟಯ್ಯ ಸಭಾ ಭವನದಲ್ಲಿ ಏರ್ಪಡಿಸಿದ್ದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಭಾನುವಾರ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು.

ಕಳೆದ 12 ವರ್ಷಗಳಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಕಾರ್ಯಕ್ರಮ ಆಯೋಜಿಸಿರಲಿಲ್ಲ. ಈ ವರ್ಷ ಒಟ್ಟು 44 ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗಿದೆ.

ನೇಕಾರರಿಗಾಗಿ ಈಗಾಗಲೇ ಬ್ಯಾಂಕ್ ಮುಖೇನ ಸಾಲ ಸೌಲಭ್ಯ ಒದಗಿಸಲಾಗಿದೆ. ಸಹಕಾರಿ ಬ್ಯಾಂಕ್ ಗಳಲ್ಲಿ ಈವರೆಗೆ ಶೈಕ್ಷಣಿಕ ಸಾಲ ವಿತರಣೆಗೆ ಅವಕಾಶ ಇರಲಿಲ್ಲ. ಈಗ ಅವಕಾಶವಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಉತ್ತೇಜನಕ್ಕೆ ಶೈಕ್ಷಣಿಕ ಸಾಲ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಿ ಗೌರವಿಸಲಾಯಿತು.

ದ್ವಿತೀಯ ಪಿಯುಸಿಯಲ್ಲಿ ಶೇ 92 ರಷ್ಟು ಫಲಿತಾಂಶ ಪಡೆದಿರುವ ಯಲಹಂಕದ ಡಾ. ಎನ್ಎಸ್ಎಎಂ ಮೋನಿಕಾ ಮಾತನಾಡಿ, ಪ್ರತಿಭಾ ಪುರಸ್ಕಾರದಿಂದ ಇನ್ನಷ್ಟು ಉತ್ತೇಜನ ಸಿಕ್ಕಿದೆ. ಅತಿ ಹೆಚ್ಚು ಅಂಕ ಪಡೆದವರನ್ನು ಗುರುತಿಸಿರುವುದು ಖುಷಿ ತಂದಿದೆ ಎಂದರು.

Edited By : PublicNext Desk
Kshetra Samachara

Kshetra Samachara

12/07/2022 01:05 pm

Cinque Terre

1.73 K

Cinque Terre

0

ಸಂಬಂಧಿತ ಸುದ್ದಿ