ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಅಂಜನಾದ್ರಿ ಚಾರಿಟಬಲ್ ಟ್ರಸ್ಟ್ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ: ಬಿಜೆಪಿ ಫಲಾನುಭವಿಗಳ ಪ್ರಕೋಷ್ಟ ವತಿಯಿಂದ ಅಂಜನಾದ್ರಿ ಚಾರಿಟಬಲ್ ಟ್ರಸ್ಟ್ ಸಹಯೋಗದೊಂದಿಗೆ ಎಂ.ಎಸ್ ರಾಮಯ್ಯ ಆಸ್ಪತ್ರೆಯ ಆಶ್ರಯದಲ್ಲಿ 46ನೇ ಬೃಹತ್ ಉಚಿತ ಆರೋಗ್ಯ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಶಿಬಿರವನ್ನು ಅಯೋಜನೆ ಮಾಡಲಾಗಿತ್ತು.

ನಗರದ ಅರ್ಕಾವತಿ ಬಡಾವಣೆ ಸಮೀಪ ಬೃಹತ್ ಆರೋಗ್ಯ ಮೇಳ ಅಯೋಜನೆ ಮಾಡಲಾಗಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬಿಜೆಪಿ ಜಿಲ್ಲಾ ಫಲಾನುಭವಿಗಳ ಪ್ರಕೋಷ್ಠಕದ ಸಂಚಾಲಕ ಧೀರಜ್ ಮುನಿರಾಜ್ ಮಾತನಾಡಿ, ತಾಲೂಕಿನಲ್ಲಿ ಸರ್ಕಾರಿ ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ ಬಿಜೆಪಿ ಸರ್ಕಾರ ಅನುಮೋದನೆ ನೀಡಿದ್ದು, ಆರೋಗ್ಯ ಸಚಿವ ಡಾ.ಸುಧಾಕರ್ ಶೀಘ್ರದಲ್ಲೇ ಮುಖ್ಯ ಮಂತ್ರಿಗಳ ಸಮ್ಮುಖದಲ್ಲಿ ಶಂಕುಸ್ಥಾಪನೆ ಕಾರ್ಯ ನೆರವೆರಿಸಲಿದ್ದಾರೆ.

ಇದುವರೆಗೂ ನಡೆಸಿರುವ ಆರೋಗ್ಯ ಶಿಬಿರದಲ್ಲಿ 4 ಸಾವಿರಕ್ಕೂ ಹೆಚ್ಚು ಮಂದಿ ಪ್ರಯೋಜನ ಪಡೆದಿದ್ದಾರೆ. ಕಣ್ಣಿನ ಶಸ್ತ್ರ ಚಿಕಿತ್ಸೆ ಅಗತ್ಯ ಇರುವವರಿಗೆ ಅವರ ಉಚಿತ ಶಸ್ತ್ರ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದೇವೆ. ಕಳೆದ ಎರಡು ವರ್ಷಗಳಿಂದ ಸತತವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಿಕೊಂಡು ಬಂದಿದ್ದೇವೆ. ಅಟಲ್ ಜನಸ್ನೇಹಿ ಕೇಂದ್ರದ ಮೂಲಕ ಪ್ರತಿಯೊಂದು ಕುಗ್ರಾಮಕ್ಕೆ ತೆರಳಿ ಬಡವರಿಗೆ ಆರೋಗ್ಯ ತಪಾಸಣೆಯನ್ನು ಮಾಡುವ ಮೂಲಕ ನಮ್ಮ ವೈದ್ಯಕೀಯ ಸೇವೆ ಮುಂದುವರೆಯುತ್ತದೆ ಎಂದು ತಿಳಿಸಿದರು.

ತಪಾಸಣಾ ಶಿಬಿರದಲ್ಲಿ ಸುಮಾರು 400 ಮಂದಿ ಫಲಾನುಭವಿಗಳು ಶಿಬಿರದಲ್ಲಿ ಚಿಕಿತ್ಸೆ ಪಡೆರು 82 ಮಂದಿ ವಿವಿಧ ರೀತಿಯ ಶಸ್ತ್ರಚಿಕಿತ್ಸೆ ಆಯ್ಕೆಯಾಗಿದ್ದಾರೆ.

Edited By : PublicNext Desk
Kshetra Samachara

Kshetra Samachara

12/07/2022 01:24 pm

Cinque Terre

2.08 K

Cinque Terre

0

ಸಂಬಂಧಿತ ಸುದ್ದಿ