ಬೆಂಗಳೂರು: ಪೇ ಸಿಎಂ ಎಂದರೆ ‘ಪೇ ಕಾಂಗ್ರೆಸ್ ಮೇಡಂ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿದ್ದರಾಮಣ್ಣ ಅಧಿಕಾರಾವಧಿಯ ಶೇ 100 ಭ್ರಷ್ಟಾಚಾರವನ್ನು ಅನಾವರಣಗೊಳಿಸುವ “ಸ್ಕ್ಯಾಮ್ ರಾಮಯ್ಯ” ಪುಸ್ತಕವನ್ನು ಬಿಡುಗಡೆ ಮಾಡಿದರು.
ಕಾಂಗ್ರೆಸ್ ಮೇಡಂಗೆ ಮಾಡುವ ಪೇಮೆಂಟ್ ಬಗ್ಗೆ ಉಲ್ಲೇಖ ಇದಾಗಿದೆ. ಶಿವಕುಮಾರ್ ಚೀಟಿ ನುಂಗಿದ್ದನ್ನು ನೋಡಿದ್ದೀರಿ. ಅವರು ಚೀಟಿ ಶಿವಕುಮಾರ್ ಆಗಿದ್ದಾರೆ ಎಂದು ತಿಳಿಸಿದರು. ಪೇ ಸಿಎಂ ಅಭಿಯಾನವು ಕರ್ನಾಟಕಕ್ಕೆ ಮಾಡುತ್ತಿರುವ ಅವಮಾನ ಎಂದು ಟೀಕಿಸಿದರು.
Kshetra Samachara
22/09/2022 10:48 pm