ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೈಗಾರಿಕಾ ಉದ್ದೇಶಕ್ಕಾಗಿ ಹೆಚ್ಚುವರಿ 50 ಸಾವಿರ ಎಕರೆ ಜಮೀನು ಭೂ ಸ್ವಾಧೀನ: ನಿರಾಣಿ

ಬೆಂಗಳೂರು: 10 ವರ್ಷದೊಳಗೆ ಕೈಗಾರಿಕೆ ಆರಂಭಿಸಿದ್ದರೆ ಭೂಮಿ ವಾಪಸ್:117 ಉದ್ದಿಮೆದಾರರಿಗೆ ನೋಟಿಸ್

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚುವರಿಯಾಗಿ 50 ಸಾವಿರ ಎಕರೆ ಭೂ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 20 ಸಾವಿರ ಮತ್ತು ಇತರ ಜಿಲ್ಲೆಗಳಲ್ಲಿ 30 ಸಾವಿರ ಎಕರೆ ಭೂಮಿ ಸೇರಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.

ವಿಧಾನ ಪರಿಷತ್‍ನ ಪ್ರಶ್ನೋತ್ತರದಲ್ಲಿ ಸದಸ್ಯರಾದ ಸಲೀಂ ಅಹಮ್ಮದ್, ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಮಂಜೂರಾದ ನಿವೇಶನ ಅಥವಾ ಭೂಮಿಯಲ್ಲಿ ಎಷ್ಟು ಸಮಯದಲ್ಲಿ ಕೈಗಾರಿಕೆ ಸ್ಥಾಪನೆ ಮಾಡಬೇಕು. ಒಂದು ವೇಳೆ ಉದ್ಯಮ ಸ್ಥಾಪನೆಯಾಗದೆ ಇದ್ದರೆ ಯಾವ ಕ್ರಮ ಕೈಗೊಳ್ಳಲಾಗುತ್ತ್ತದೆ ಎಂದು ಪ್ರಶ್ನಿಸಿದರು.

ಕೈಗಾರಿಕೆ ಇಲಾಖೆಯಿಂದ 188 ಕೈಗಾರಿಕಾ ಪ್ರದೇಶ ಸ್ಥಾಪಿಸಲಾಗಿದೆ. ಅದಕ್ಕಾಗಿ 1.60 ಲಕ್ಷ ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಅದರಲ್ಲಿ 52,008 ಎಕರೆಯನ್ನು ಅಭಿವೃದ್ಧಿ ಪಡಿಸಲಾಗಿದೆ. ಉಳಿದ ಭೂಮಿಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ನಿರಾಣಿ ಹೇಳಿದರು.

ಈವರೆಗೂ 117 ಉದ್ದಿಮೆದಾರರಿಗೆ ನೋಟಿಸ್ ನೀಡಲಾಗಿದೆ. ಕೆಲವರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದಿದ್ದಾರೆ ಇನ್ನೂ ಮುಂದೆ ಕೆವಿಯಟ್ ಹಾಕಿ ಭೂಮಿ ಹಿಂಪಡೆಯಲು ಮುಂದಿನ ಕ್ರಮ ಜರುಗಿಸಲಾಗುವುದು

ಎಂದರು.

Edited By : PublicNext Desk
Kshetra Samachara

Kshetra Samachara

23/09/2022 05:55 pm

Cinque Terre

614

Cinque Terre

0

ಸಂಬಂಧಿತ ಸುದ್ದಿ