ದೊಡ್ಡಬಳ್ಳಾಪುರ : ಸಾವಿರ ವರ್ಷಗಳ ಹಿಂದೆ ಭಾರತದಲ್ಲಿ ಸಂಪೂರ್ಣವಾಗಿ ಮನುಸ್ಮೃತಿ ಜಾರಿಯಲಿತ್ತು. ಈ ಸಮಯದಲ್ಲಿ ಆಡು ಭಾಷೆಯಲ್ಲಿ ವಚನಗಳ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿದವರು ದೇವರ ದಾಸಿಮಯ್ಯ ಎಂದು ಎಂ.ಜಿ ಶ್ರೀನಿವಾಸ್ ತಿಳಿಸಿದರು.
ದೇವರ ದಾಸಿಮಯ್ಯ ಜಯಂತಿ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಅಯೋಜನೆ ಮಾಡಲಾಗಿತ್ತು. ಮತ್ತು ಕಲಾ ತಂಡಗಳ ಮೆರವಣಿಗೆಗೆ ಚಾಲನೆ ನೀಡಲಾಗಿತ್ತು, ಕಾರ್ಯಕ್ರಮದಲ್ಲಿ ಶಾಸಕ ವೆಂಕಟರಮಣಯ್ಯ, ನಗರಸಭೆ ಅಧ್ಯಕ್ಷೆ ಸುಧಾರಾಣಿ, ದೇವಾಂಗ ಮಂಡಳಿಯ ಎಲ್ಲಾ ಪದಾಧಿಕಾರಿಗಳು, ಮುಖಂಡರುಗಳು ಭಾಗವಹಿಸಿದ್ದರು.
ಮಾಧ್ಯಮದೊಂದಿಗೆ ಮಾತನಾಡಿದ ದೇವಾಂಗ ಮಂಡಳಿ ಅಧ್ಯಕ್ಷರಾದ ಎಂ.ಜಿ. ಶ್ರೀನಿವಾಸ್, ಬಸವಣ್ಣನವರು ಬರುವ ನೂರು ವರ್ಷಗಳ ಮುನ್ನವೇ ದೇವರ ದಾಸಿಮಯ್ಯ ವಚನಗಳ ಮೂಲಕ ಜನರಲ್ಲಿ ಜಾಗೃತಿಯನ್ನ ಮೂಡಿಸಿದವರು. ವಚನಗಳನ್ನು ಆಲಿಸುವುದರಿಂದ ಜೀವನದಲ್ಲಿ ಸ್ಫೂರ್ತಿ ಹೆಚ್ಚುತ್ತದೆ. ಸರಿಯಾದ ದಾರಿಯಲ್ಲಿ ನಡೆಯುವ ಮೂಲಕ ಜೀವನ ಸಾರ್ಥಕ ಮಾಡಿಕೊಳ್ಳಲು ಶರಣರ ವಚನಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಅಂದ್ರು.
Kshetra Samachara
06/04/2022 07:06 pm