ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮೈಸೂರು ಬ್ಯಾಂಕ್ ಸರ್ಕಲ್ ಶನಿದೇವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಂಗಳೂರು: ಶನಿ ಗೃಹ ಮಕರ ರಾಶಿಯಿಂದ ಕುಂಭ ರಾಶಿಗೆ ಪ್ರವೇಶಿಸುವ ಪರ್ವಕಾಲವಾದ ಶುಕ್ರವಾರ ದಿವಸ ಬೆಂಗಳೂರಿನ ಕೇಂದ್ರ ಸ್ಥಾನವಾದ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿರುವ ಶ್ರೀ ಶನಿದೇವರ ದೇವಸ್ಥಾನದಲ್ಲಿ ಶ್ರೀದೇವರಿಗೆ ವಿಶೇಷ ಉತ್ಸವವನ್ನು ಏರ್ಪಡಿಸಲಾಗಿದೆ.

ಇದರನ್ವಯ ಬೆಳಿಗ್ಗೆ ಶ್ರೀಸ್ವಾಮಿಯವರಿಗೆ ವಿಶೇಷ ಅಭಿಷೇಕ ನಂತರ ಶಾಂತಿಹೋಮ, ವಿಶೇಷ ಅಲಂಕಾರ, ಶ್ರೀದೇವರ ಪ್ರಾಕಾರೋತ್ಸವ ನಡೆಯಲಿದೆ. ಮಧ್ಯಾಹ್ನ ಮಹಾಮಂಗಳಾರತಿ ತದನಂತರ ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಲಿದೆ. ಶನಿವಾರ ಅಮವಾಸ್ಯೆ ಪೂಜೆ ಯಥಾಪ್ರಕಾರ ನೆರವೇರಲಿದೆ.

ಈ ಎಲ್ಲಾ ಕಾರ್ಯಕ್ರಮಗಳಲ್ಲೂ ಭಕ್ತಾದಿಗಳು ಅತಿಹೆಚ್ಚಿನ ಸಂಖ್ಯೆಯಲ್ಲಿ ಶ್ರೀಶನಿದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಶ್ರೀ ದೇವಸ್ಥಾನದ ಪ್ರಧಾನ ಅರ್ಚಕರು ಗಣೇಶ ಅವರು ತಿಳಿಸಿದ್ದಾರೆ.

ಪ್ರವೀಣ್ ರಾವ್ ಬೆಂಗಳೂರು.

Edited By :
Kshetra Samachara

Kshetra Samachara

28/04/2022 03:18 pm

Cinque Terre

1.23 K

Cinque Terre

0

ಸಂಬಂಧಿತ ಸುದ್ದಿ