ಬೆಂಗಳೂರು: ಹಿಂದಿ ನಮ್ಮ ರಾಷ್ಟ್ರ ಭಾಷೆ ಎಂದು ಹೇಳಿಕೆ ನೀಡಿದ್ದ ಬಾಲಿವುಡ್ ನಟ ಅಜಯ್ ದೇವಗನ್ ವಿರುದ್ಧ ಆಕ್ರೋಶದ ಸುರಿಮಳೆನೆ ಸುರಿಯುತ್ತಿದೆ.
ಸಾಮಾಜಿಕ ಜಾಲತಾಣದಲ್ಲಂತೂ ಅಜಯ್ ದೇವಗನ್ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು,ವಿವಿಧ ಪರ ಸಂಘ-ಸಂಸ್ಥೆಗಳಿಂದ ಅಸಮಾಧಾನ ವ್ಯಕ್ತವಾಗುತ್ತಿವೆ.
ಅಜಯ್ ದೇವಗನ್ ಹೇಳಿಕೆ ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ರಸ್ತೆಯಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಳಗ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕನ್ನಡ ವಿರೋಧಿ ಹೇಳಿಕೆ ನೀಡಿದ ಅಜಯ್ ದೇವಗನ್ ಭಾವಚಿತ್ರ ಹಿಡಿದು ಧಿಕ್ಕಾರ ಕೂಗಿದರು.
ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಪರಿಣಾಮ ಇವರನ್ನ ಪೊಲೀಸರು ವಶಕ್ಕೆ ಪಡೆದುಕೊಂಡರು. ಈ ವೇಳೆ ಕರವೇ ರಾಜ್ಯ ಉಪಾಧ್ಯಕ್ಷ ಶಿವರಾಜಗೌಡ ಮಾತನಾಡಿ, ಹಿಂದಿ ರಾಷ್ಟ್ರೀಯ ಭಾಷೆ ಎಂದು ಹೇಳುವ ಮೂಲಕ ಕನ್ನಡ ಭಾಷೆಯನ್ನ ಆವಮಾನ ಮಾಡಿದ್ದಾರೆ. ಪದೇ ಪದೇ ಕನ್ನಡಕ್ಕೆ ಅವಮಾನವಾಗುವುದನ್ನು ನಾವು ಸಹಿಸುವುದಿಲ್ಲ. ರಾಷ್ಟ್ರ ಭಾಷೆ ಹಿಂದಿ ಎಂಬ ವಿಚಾರವಾಗಿ ಉತ್ತರ ಭಾರತದ ಯಾರೇ ಹೇಳಿಕೆ ನೀಡಿದರೂ ನಾವು ಸಹಿಸುವುದಿಲ್ಲ.ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದರು.
ಹಿಂದಿಯಲ್ಲಿ ಡಬ್ ಮಾಡಿದ ಮಾತ್ರಕ್ಕೆ ಅದು ಪ್ಯಾನ್ ಇಂಡಿಯಾ ಸಿನಿಮಾ ಆಗುವುದಿಲ್ಲ. ಅಲ್ಲದೆ ಹಿಂದಿ ರಾಷ್ಟ್ರೀಯ ಭಾಷೆಯಲ್ಲ ಅಂತಲೇ ಕಿಚ್ಚ ಸುದೀಪ್ ಹೇಳಿದ್ದರು. ಇದಕ್ಕೆ ಟ್ವಿಟರ್‌ನಲ್ಲಿ ಉತ್ತರಿಸಿದ ಅಜಯ್ ದೇವಗನ್,ನಟ ಸುದೀಪ್ ಗೆ ರಾಷ್ಟ್ರೀಯ ಭಾಷೆ ಹಿಂದಿ ಅಲ್ಲವಾದರೆ ಸಿನಿಮಾವನ್ನ ಹಿಂದಿಗೆ ಯಾಕೆ ಡಬ್ ಮಾಡುತ್ತೀರಾ ಎಂದು ಪ್ರಶ್ನಿಸಿದ್ದರು
PublicNext
28/04/2022 03:33 pm