ವರದಿ: ಬಲರಾಮ್ ವಿ.
ಬೆಂಗಳೂರು: ಪುರಾಣ ಪ್ರಸಿದ್ಧ ಶ್ರೀ ಕೋಟೆ ವೆಂಕಟರಮಣ ಸ್ವಾಮಿಯ ಬ್ರಹ್ಮರಥೋತ್ಸವ 16 ವರ್ಷಗಳ ನಂತರ ಅದ್ಧೂರಿಯಾಗಿ ಜರುಗಿತು. ಊರ-ಪರವೂರ ಸಾವಿರಾರು ಭಕ್ತಾದಿಗಳೊಂದಿಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ವಿಶೇಷ ಪೂಜೆ ಸಲ್ಲಿಸಿ, ರಥೋತ್ಸವದಲ್ಲಿ ಭಾಗಿಯಾದರು.
ಕೆಆರ್ ಪುರ, ಕುಂಬಾರ ಬೀದಿ, ಕಾಲೇಜು ರಸ್ತೆ, ಹಳೆ ಪೋಸ್ಟ್ ಆಫೀಸ್ ರಸ್ತೆ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ರಥದ ವೈಭವಯುತ ಮೆರವಣಿಗೆ ನಡೆಯಿತು. ಮಂಗಳವಾದ್ಯ, ವೀರಗಾಸೆ, ಪೂಜಾ ಕುಣಿತ, ಬ್ಯಾಂಡ್ ಸೆಟ್, ಕೀಲು ಕುದುರೆ ಸಹಿತ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. ರಥೋತ್ಸವ ನಿಮಿತ್ತ ಶ್ರೀ ಕೋಟೆ ವೆಂಕಟರಮಣ ಸ್ವಾಮಿ, ಶ್ರೀ ಕಾಶಿ ವಿಶ್ವೇಶ್ವರ ಸ್ವಾಮಿ ಮತ್ತು ಶ್ರೀ ಕೋಟೆ ಆಂಜನೇಯ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಶ್ರೀ ಕೋಟೆ ವೆಂಕಟರಮಣ ಸ್ವಾಮಿಯ ಭಕ್ತರಾದ ನಗರಾಭಿವೃದ್ಧಿ ಸಚಿವರು, ಒಂದು ವಾರದಿಂದಲೂ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ್ದಾರೆ. ಇಂದು ಸುಮಾರು ಹತ್ತು ಸಾವಿರ ಜನರಿಗೆ ಅನ್ನ ಸಂತರ್ಪಣೆ ಮಾಡಿದ್ದು, ಖುದ್ದು ನಿಂತು ಊಟದ ಸುವ್ಯವಸ್ಥೆ ನೋಡಿಕೊಂಡರು.
Kshetra Samachara
14/05/2022 10:40 pm