ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಆಟಿಕೆ ಸಾಮಾಗ್ರಿಯಲ್ಲಿ ಕಂಗೊಳಿಸಲಿದ್ದಾನೆ ಸಾಯಿಬಾಬಾ

ಬೆಂಗಳೂರು: ಗುರುಪೂರ್ಣಿಮೆಯ ಅಂಗವಾಗಿ ಜೆಪಿನಗರದ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ದೇವಸ್ಥಾನದಲ್ಲಿ 1 ಲಕ್ಷ ಆಟಿಕೆ ಸಾಮಗ್ರಿಗಳನ್ನು ಬಳಸಿ ವಿಶೇಷ ಆಲಂಕಾರ ಮಾಡಲಾಗುತ್ತಿದೆ. 50 ಕ್ಕೂ ಹೆಚ್ಚು ವಿವಿಧ ಆಟಿಕೆ ಸಾಮಗ್ರಿಗಳ ಬಳಕೆ ಮಾಡಲಾಗುತ್ತಿದೆ. ಮತ್ತು ಗುರುಪೂರ್ಣಿಮೆ ಪೂಜೆ ನಂತರ ಸರಕಾರಿ ಹಾಗೂ ಖಾಸಗಿ ಶಾಲೆಗಳಿಗೆ, ಅಪಾರ್ಟ್‌ಮೆಂಟ್‌ಗಳಿಗೆ ಅಲಂಕಾರದಲ್ಲಿ ಉಪಯೋಗ ಮಾಡುವ ವಸ್ತುಗಳನ್ನು ವಿತರಣೆ ಮಾಡುವ ನಿರ್ಧಾರ ಮಾಡಲಾಗಿದೆ.

ಕಳೆದ ಬಾರಿ ಕೋವಿಡ್‌ ಇದ್ದಿದ್ದರಿಂದ ಮೂರು ಲಕ್ಷ ಮಾತ್ರೆಗಳನ್ನು ಬಳಸಿ ಆಲಂಕಾರ ಮಾಡಲಾಗಿತ್ತು. ಅದನ್ನ 1 ಲಕ್ಷ ಕುಟುಂಬಗಳಿಗೆ ಹಂಚಲಾಗಿತ್ತು. ಈ ಬಾರಿ ಮಕ್ಕಳು ಆಟ ಆಡುವಂತಹ ಸಾಮಗ್ರಿಗಳಾದ 50 ವಿವಿಧ ಸಾಮಗ್ರಿಗಳನ್ನು ಬಳಸಿ ವಿಶೇಷ ಆಲಂಕಾರವನ್ನು ಮಾಡಲಾಗುತ್ತಿದೆ. ಗೋಲಿ, ಬುಗರಿ, ಗಿಲ್ಲಿದಾಂಡು, ಕ್ಯಾಟರ್‌ ಪಿಲ್ಲರ್‌ ನಂತಹ ಸಾಂಪ್ರದಾಯಿಕ ಆಟದ ಸಾಮಗ್ರಿಗಳು, ಅಲ್ಲದೆ, ಕ್ರಿಕೆಟ್‌, ಟೆನ್ನೀಸ್‌, ಹಾಕಿ ಬ್ಯಾಟುಗಳು ಸೇರಿದಂತೆ ಹಲವಾರು ವಿಧದ ಕ್ರೀಡಾ ಸಾಮಗ್ರಿಗಳನ್ನು ಇಲ್ಲಿ ಬಳಸಲಾಗುತ್ತಿದೆ.

ಈ ಸಾಮಗ್ರಿಗಳನ್ನು ಅಗತ್ಯವಿರುವಂತವರಿಗೆ ಉಚಿತವಾಗಿ ನೀಡಲಾಗುವುದು. ಕ್ರೀಡಾ ಸಾಮಗ್ರಿಗಳ ಅಗತ್ಯವಿರುವಂತಹ ಖಾಸಗಿ ಹಾಗೂ ಸರಕಾರಿ ಶಾಲೆಗಳು, ವಸತಿ ಸಮುಚ್ಚಯದ ಸಂಘಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಜುಲೈ 13 ರಿಂದ ಒಂದು ವಾರಗಳ ಕಾಲ ಈ ವಿಶೇಷ ಅಲಂಕಾರವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಬಹುದಾಗಿದೆ.

ನವೀನ್ ಪಬ್ಲಿಕ್ ನೆಕ್ಸ್ಟ್ ಬೆಂಗಳೂರು.

Edited By : Manjunath H D
Kshetra Samachara

Kshetra Samachara

09/07/2022 06:08 pm

Cinque Terre

3.36 K

Cinque Terre

0

ಸಂಬಂಧಿತ ಸುದ್ದಿ