ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಘಾಟಿ ಸುಬ್ರಮಣ್ಯ ಕ್ಷೇತ್ರದ ಹುಂಡಿಯಲ್ಲಿ 69 ಲಕ್ಷ ರೂ. ಸಂಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾನದಲ್ಲಿ ಭಕ್ತರ ಹುಂಡಿ ಹಣ ಎಣಿಕೆ ಕಾರ್ಯ ಮಾಡಲಾಗಿದ್ದು, 69,04,308 ರೂಪಾಯಿ ಭಕ್ತರ ಕಾಣಿಕೆ ರೂಪದಲ್ಲಿ ದೇವಸ್ಥಾನಕ್ಕೆ ಬಂದಿದೆ.

ಪ್ರತಿ ತಿಂಗಳು ಹುಂಡಿ ಹಣ ಎಣಿಕೆ ಕಾರ್ಯ ಮಾಡುವಂತೆ ಈ ತಿಂಗಳ ಎಣಿಕೆ ಕಾರ್ಯವನ್ನು ದೇವಸ್ಥಾನದ ಆವರಣದಲ್ಲಿ ಇಂದು ಮಾಡಲಾಗಿತ್ತು. ಎಣಿಕೆ ಕಾರ್ಯದಲ್ಲಿ ಭಾಗವಹಿಸಲು ಭಕ್ತರಿಗೂ ಅವಕಾಶ ನೀಡಲಾಗಿತ್ತು. ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯವನ್ನು ಮಾಡಲಾಗಿತ್ತು. ಒಟ್ಟು 69,04,308 ರೂಪಾಯಿ ನಗದು ಹಣ ಕಾಣಿಕೆ ರೂಪದಲ್ಲಿ ದೇವಸ್ಥಾನಕ್ಕೆ ಬಂದಿದೆ. ಇದರ ಜೊತೆಗೆ 6 ಗ್ರಾಂ 400 ಮಿಲಿ ಗ್ರಾಂ ಚಿನ್ನ ಮತ್ತು 1 ಕೆ.ಜಿ. 843 ಗ್ರಾಂ ಬೆಳ್ಳಿ ಕಾಣಿಕೆಯಾಗಿ ಬಂದಿದೆ.

ಮುಜರಾಯಿ ಇಲಾಖೆ ಸಹಾಯಕ ಆಯುಕ್ತೆ ಜೆ.ಜೆ.ಹೇಮಾವತಿ, ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರಿ ನಾಗರಾಜ್ ನೇತೃತ್ವದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ಮಾಡಲಾಯಿತು.

Edited By : Vijay Kumar
Kshetra Samachara

Kshetra Samachara

05/09/2022 06:59 pm

Cinque Terre

1.11 K

Cinque Terre

0

ಸಂಬಂಧಿತ ಸುದ್ದಿ