ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ದೃಷ್ಟಿಯಿಂದ ಸರ್ವಜ್ಞನಗರ ವಿಧಾನಸಭೆ ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಉಪಕರಣ ನೀಡುವ ಉದ್ದೇಶದಿಂದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸಾಂಕೇತಿಕವಾಗಿ ಸ್ಥಳೀಯ ಶಾಸಕ ಕೆ.ಜೆ. ಜಾರ್ಜ್ ಅವರು ಸ್ಮಾರ್ಟ್ ಕ್ಲಾಸ್ ಉಪಕರಣವನ್ನು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಶಾಸಕರು, ಸರ್ವಜ್ಞನಗರ ವಿಧಾನಸಭೆ ಕ್ಷೇತ್ರದ 28 ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಉಪಕರಣ ಹಸ್ತಾಂತರ ಮಾಡಲಾಗಿದ್ದು, 15 ದಿನಗಳಲ್ಲಿ ಸ್ಮಾರ್ಟ್ ಕ್ಲಾಸ್ ಪ್ರಾರಂಭಿಸಲು ಸೂಚನೆ ನೀಡಲಾಗಿದೆ. ಸರ್ವಜ್ಞನಗರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಗಳು ಮತ್ತು ಅಂಗನವಾಡಿಗಳ ಉನ್ನತೀಕಣಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದರು. ಶಾಲೆ ಎಸ್ ಡಿಎಂಸಿ ಅಧ್ಯಕ್ಷ ತಾಯಣ್ಣರೆಡ್ಡಿ ಮಾತನಾಡಿ, ಉತ್ತಮ ಶಿಕ್ಷಣ ಒದಗಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದ್ದು, ಶಾಸಕರು ತಮ್ಮ ಹಣದಿಂದಲೇ ಸರ್ಕಾರಿ ಶಾಲೆಗಳಿಗೆ ಈ ಸ್ಮಾರ್ಟ್ ಕ್ಲಾಸ್ ಉಪಕರಣ ನೀಡುವ ಸೇವಾ ಕೈಂಕರ್ಯ ಮಾಡಿದ್ದಾರೆ ಎಂದರು.
Kshetra Samachara
12/01/2022 07:58 pm