ಬೆಂಗಳೂರು: ಬೆಂಗಳೂರಿನ ಜವಾಹರಲಾಲ್ ನೆಹರೂ ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ರಾಜ್ಯ ಸರ್ಕಾರ, ಭಾರತ ರತ್ನ ಪ್ರೊ. CNR ರಾವ್ ಅವರಿಗೆ ಪ್ರತಿಷ್ಠಿತ 'ಎನಿ ಎನರ್ಜಿ ಪ್ರೊಂಟೈರ್ಸ್- 2020 ಪ್ರಶಸ್ತಿ' ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೌರವಿಸಿದರು.
ಎನರ್ಜಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ನೀಡಲಾಗುವ ಇಟಲಿ ದೇಶದ ಸರ್ಕಾರದ ಪ್ರಶಸ್ತಿ ಇದಾಗಿದೆ. ಈ ಪ್ರಶಸ್ತಿಯನ್ನು ಎನರ್ಜಿ ಕ್ಷೇತ್ರದ ನೋಬಲ್ ಪ್ರಶಸ್ತಿ ಎನ್ನಲಾಗ್ತಿದೆ. ಪ್ರೊ.ರಾವ್ ಅವರು ಇಡೀ ಏಷ್ಯಾ ಖಂಡದಲ್ಲಿಯೇ ಈ ಪ್ರಶಸ್ತಿ ಪಡೆಯುತ್ತಿರುವ ಮೊದಲ ವಿಜ್ಞಾನಿ ಎಂಬುದು ನಮ್ಮ ದೇಶ ಮತ್ತು ರಾಜ್ಯಕ್ಕೆ ಹೆಮ್ಮೆಯ ವಿಚಾರ.
ಪ್ರಶಸ್ತಿಯನ್ನು ಈಗಾಗಲೇ ಘೋಷಿಸಲಾಗಿತ್ತು. ಆದರೆ, ಕೋವಿಡ್ ಹಿನ್ನೆಲೆಯಿಂದಾಗಿ ಪ್ರದಾನ ಮಾಡಿರಲಿಲ್ಲ. ಇಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಅಶ್ವತ್ಥನಾರಾಯಣ, ಡಾ.ಇಂದುಮತಿ ರಾವ್, ಜವಾಹರಲಾಲ್ ನೆಹರೂ ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಅಧ್ಯಕ್ಷ ಪ್ರೊ.ಜಿ.ಯು.ಕುಲಕರ್ಣಿ ಸೇರಿದಂತೆ ಅನೇಕ ವಿಜ್ಞಾನಿಗಳು ಉಪಸ್ಥಿತರಿದ್ದರು.
PublicNext
23/03/2022 02:07 pm