ವರದಿ- ಬಲರಾಮ್ ವಿ
ಬೆಂಗಳೂರು: ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಇಂಜಿನಿಯರಿಂಗ್ ಟೆಕ್ನಾಲಜಿ ಸಂಸ್ಥೆಯು ವಿದ್ಯಾರ್ಥಿಗಳ ವಾರ್ಷಿಕ ಯೋಜನೆಗಳ ಪ್ರಾಜೆಕ್ಟ್ ಎಕ್ಸಿಬಿಷನ್ ವೈಬ್ರೇಷನ್ಸ್ - 2022ನ್ನು ಬಿದರಹಳ್ಳಿಯ ಈಸ್ಟ್ ಪಾಯಿಂಟ್ ಕಾಲೇಜ್ ನಲ್ಲಿ ಆಯೋಜಿಸಲಾಗಿತ್ತು.
ಸುಮಾರು 100 ವಿದ್ಯಾರ್ಥಿಗಳ ತಮ್ಮ ಒಂದು ವರ್ಷದ ಪ್ರಾಜೆಕ್ಟ್ ಗಳನ್ನು ಪ್ರದರ್ಶನ ಮಾಡಿದರು. ಮೂರರಿಂದ ನಾಲ್ಕು ಜನ ಒಳಗೊಂಡ ವಿದ್ಯಾರ್ಥಿಗಳ ಗುಂಪಿನಿಂದ ಅಭಿವೃದ್ಧಿಪಡಿಸಲ್ಪಟ್ಟ ಯೋಜನೆಗಳನ್ನು ಪ್ರದರ್ಶಿಸಲಾಯಿತು.
ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್, ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಮತ್ತು ಸಿವಿಲ್ ಎಂಜಿನಿಯರಿಂಗ್ ಕ್ಷೇತ್ರಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಮಾಜದಲ್ಲಿ ಉದ್ಭವಿಸುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಈ ರೀತಿಯ ಎಕ್ಸಿಬಿಷನ್ ಅನುಕೂಲಕರವಾಗಿದೆ ಎಂದು ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಸ್ ಆರ್ ಶಂಕಪಾಲ್ ತಿಳಿಸಿದರು.
ಎಂ ಜಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ರಮಾದೇವಿ ವೆಂಕಟಪತಿ, ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಗಳ ಸಿಇಒಗಳಾದ ಪ್ರಮೋದ್ ಗೌಡ, ರಾಜೀವ್ ಗೌಡ ಮತ್ತು ಎಂ ಜಿ ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ಪೀಟರ್ ಫ್ರಾನ್ಸಿಸ್ ಇದ್ದರು.
PublicNext
28/06/2022 07:44 pm