ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಆವಿಷ್ಕಾರ-ನಾವೀನ್ಯತೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ವಿಜ್ಞಾನ ಮತ್ತು ತಂತ್ರಜ್ಞಾನ ಅಥವಾ ಆರ್ಥಿಕತೆಯ ಯಾವುದೇ ವಿಭಾಗದಿಂದ ಮೂಡಿದ ಜನಸಾಮಾನ್ಯರ ಅದರಲ್ಲೂ ಗ್ರಾಮೀಣ ಪ್ರದೇಶದ ಜನಜೀವನವನ್ನು ಪರಿವರ್ತಿಸಲು ಸಹಾಯಕವಾದ ಅಥವಾಉದ್ಯಮಗಳು ಹಾಗೂ ಉದ್ಯೋಗ ಸೃಷ್ಟಿಸಿದ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ಆವಿಷ್ಕಾರ-ನಾವೀನ್ಯತೆ ಪ್ರಶಸ್ತಿ ಅರ್ಜಿ ಆಹ್ವಾನಿಸಲಾಗಿದೆ.

ಸ್ನಾತಕೋತ್ತರ ವಿಭಾಗಗಳಿಗೆ ಸ್ನಾತಕೋತ್ತರ ವಿದ್ಯಾರ್ಥಿಗಳ ಅತ್ಯುತ್ತಮ ಆವಿಷ್ಕಾರ, ನಾವಿನ್ಯತೆಗೆ ಪ್ರೋ.ಯು. ಆರ್.ರಾವ್ ಪ್ರಶಸ್ತಿ, ಪದವಿ ವಿಭಾಗಕ್ಕೆ ಪದವಿ ವಿದ್ಯಾರ್ಥಿಗಳ ಅತ್ಯುತ್ತಮ ಆವಿಷ್ಕಾರ, ನಾವಿನ್ಯತೆಗೆ ಡಾ.ಎಸ್.ಕೆ. ಶಿವಕುಮಾರ್ ಪ್ರಶಸ್ತಿ ನೀಡಲಾಗುತ್ತದೆ.

ಪ್ರಶಸ್ತಿಯ ಮೊತ್ತ 10 ಸಾವಿರ ನಗದು ಪುರಸ್ಕಾರ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ https://kstacademy.in/en/. ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ತಿಳಿಸಿದೆ.

Edited By : PublicNext Desk
PublicNext

PublicNext

03/10/2022 08:29 am

Cinque Terre

13.3 K

Cinque Terre

0