ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆನೇಕಲ್: ಅಂಬೇಡ್ಕರ್ ಜಯಂತಿ ಹಿನ್ನೆಲೆ ಪೂರ್ವಭಾವಿ ಸಭೆ

ಆನೇಕಲ್: ಎಲ್ಲ ಸಮುದಾಯಗಳಲ್ಲಿ ಸೋದರತೆಯನ್ನು ಬೆಳೆಸುವುದಕ್ಕೆ ಮತ್ತೆ ಐಕ್ಯತೆಯನ್ನು ಮೂಡಿಸುವುದಕ್ಕಾಗಿ ಈ ಬಾರಿ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಆನೇಕಲ್ ಅಧ್ಯಕ್ಷ ರಾವಣ ತಿಳಿಸಿದರು.

ಆನೇಕಲ್ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಇರುವ ಅಂಬೇಡ್ಕರ್ ಗ್ರಂಥಾಲಯದಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಈ ಬಾರಿ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಅಂಬೇಡ್ಕರ್ ಜಯಂತಿ ಪ್ರಯುಕ್ತ ಕುಸ್ತಿ ಪಂದ್ಯಾವಳಿಗಳು, ಜೈಭೀಮ್ ಕಬಡ್ಡಿ ಕಪ್ ಹಾಗೂ ಬುದ್ಧನ ನಾಟಕವನ್ನು ವಿಶೇಷವಾಗಿ ಆಯೋಜನೆ ಮಾಡಿಕೊಳ್ಳಲಾಗುತ್ತಿದೆ . ಎಲ್ಲರಲ್ಲಿ ಸಾಮರಸ್ಯ ಮೂಡಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ರಾವಣ ತಿಳಿಸಿದರು

ಇನ್ನೂ ಮತ್ತೊಬ್ಬರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಗೌತಮ್ ವೆಂಕಿ ಇದೇ ತಿಂಗಳು ಏಪ್ರಿಲ್ 14 ನೇ ತಾರೀಕು ಅಂಬೇಡ್ಕರ್ ಜಯಂತಿ ಪ್ರಯುಕ್ತ ಕುಸ್ತಿ ಪಂದ್ಯಾವಳಿಗಳನ್ನು ಏರ್ಪಡಿಸಲಾಗಿದೆ ರಾಜ್ಯದ ಕುಸ್ತಿ ಪಟುಗಳು ಅತಿ ಹೆಚ್ಚು ಭಾಗಿಯಾಗುವಂತೆ ಈ ಮೂಲಕ ಮನವಿ ಮಾಡಿಕೊಂಡರು.

ಹರೀಶ್ ಗೌತಮನಂದ ಪಬ್ಲಿಕ್ ನೆಕ್ಸ್ಟ್, ಆನೇಕಲ್

Edited By :
Kshetra Samachara

Kshetra Samachara

02/04/2022 05:27 pm

Cinque Terre

2.67 K

Cinque Terre

0

ಸಂಬಂಧಿತ ಸುದ್ದಿ