ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪೂರ್ವ ತಾಲ್ಲೂಕಿನ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ತಹಶೀಲ್ದಾರ್ ಅಜಿತ್ ರೈ ಚಾಲನೆ

ಬೆಂಗಳೂರು: ಬೆಂಗಳೂರು ಪೂರ್ವ ತಾಲೂಕು ಸಹಯೋಗದೊಂದಿಗೆ ಲೌರಿ ಮೆಮೊರಿಯಲ್ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಒಂದು ದಿನದ ಸರ್ಕಾರಿ ನೌಕರರ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಬೆಂಗಳೂರು ಪೂರ್ವ ತಾಲ್ಲೂಕು ತಹಶೀಲ್ದಾರ ಅಜಿತ್ ರೈ ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪೂರ್ವ ತಾಲೂಕು ಆರೋಗ್ಯಧಿಕಾರಿ ಡಾ.ಚಂದ್ರಶೇಖರ ಅವರು, ಪ್ರತಿಯೊಬ್ಬರು ದೈಹಿಕ, ಮಾನಸಿಕ ಹಾಗೂ ಸಾಮಾಜಿಕವಾಗಿ ಆರೋಗ್ಯವಂತರಾಗಿಯಿರಲು ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸುವಂತೆ ಸಲಹೆ ನೀಡಿದರು. ಪೂರ್ವ ತಾಲೂಕಿನಲ್ಲಿ 12ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಚಾಲನೆ ನೀಡಿರುವುದಾಗಿ ತಿಳಿಸಿದರು.

ಬಳಿ ಮಾತನಾಡಿದ ಬೆಂಗಳೂರು ಪೂರ್ವ ತಾಲೂಕು ನೌಕರರ ಸಂಘದ ಅಧ್ಯಕ್ಷ ಭಾಷಾ ಅವರು, ಕೋವಿಡ್ ಕಾರಣದಿಂದ ಸರಳವಾಗಿ ಕ್ರಿಕೆಟ್, ಕಬ್ಬಡಿ, ವಾಲಿಬಾಲ್, ಸೇರಿದಂತೆ ಅನೇಕ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಎರಡು ದಿನಗಳ ಕ್ರೀಡಾಕೂಟ ಆಯೋಜಿಸುವ ಮೂಲಕ ನೌಕರರಲ್ಲಿ ಕ್ರೀಡಾ ಮನೋಭಾವ ಬೆಳೆಸಲಾಗುವುದು ಎಂದರು.

ಇನ್ನೂ ಕಾರ್ಯಕ್ರಮದಲ್ಲಿ ಪೂರ್ವ ತಾಲೂಕು ಇಓ ಮಂಜುನಾಥ್, ಮಾಜಿ ನಾಮನಿರ್ದೇಶಿತ ಪಾಲಿಕೆ ಸದಸ್ಯ ಅಂತೋನಿ ಸ್ವಾಮಿ ಹಾಗೂ ನೂರಾರು ಸರ್ಕಾರಿ ನೌಕರರು ಭಾಗವಹಿಸಿದ್ದರು.

Edited By : Manjunath H D
Kshetra Samachara

Kshetra Samachara

16/03/2022 10:14 pm

Cinque Terre

1.6 K

Cinque Terre

0