ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕ್ರೀಡೆ ವಿದ್ಯಾರ್ಥಿಗಳ ಶಕ್ತಿಯೊಂದಿಗೆ ಮನೋವಿಕಾಸಕ್ಕೆ ಸ್ಪೂರ್ತಿ: ನಿಸರ್ಗ ನಾರಾಯಣಸ್ವಾಮಿ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ, ಹಿರಿಯ ಪ್ರಾಥಮಿಕ ಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟ ನಡೆಯಿತು. ಜಿಲ್ಲಾ ಪಂಚಾಯ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ದೇವನಹಳ್ಳಿ ಕ್ರೀಡಾ & ಸಾಂಸ್ಕೃತಿಕ ಸಂಘ ವತಿಯಿಂದ ಕ್ರೀಡಾಕೂಟ ನಡೆಯುತ್ತಿದೆ. 2022-23ನೇ ಸಾಲಿನಲ್ಲಿ 32 ಹಿರಿಯ ಪ್ರಾಥಮಿಕ ಶಾಲೆ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಆಟದ ಮೈದಾನದಲ್ಲಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಗಿಡಕ್ಕೆ ನೀರು ಹಾಯಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಕ್ರೀಡೆಯಲ್ಲಿ ಮಕ್ಕಳು ಸಕಾರಾತ್ಮಕವಾಗಿ ಭಾಗವಹಿಬೇಕು. ವಿದ್ಯಾರ್ಥಿಗಳು ಸೋಲು ಗೆಲುವನ್ನ ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಪೂರ್ತಿ ಮೆರೆಯಬೇಕು ಎಂದು ದೇವನಹಳ್ಳಿ ಶಾಸಕ ತಿಳಿಸಿದರು.

ಕ್ರೀಡಾ ಜ್ಯೋತಿಯನ್ನ ದೇವನಹಳ್ಳಿಯ ಸ್ಟರ್ಲಿಂಗ್ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಹೊತ್ತು ತಂದರು ಹಾಗೂ ಕ್ರೀಡಾ ಪ್ರತಿಜ್ಞಾ ಸ್ವೀಕಾರ ಮಾಡಲಾಯಿತು.

-ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್ ದೇವನಹಳ್ಳಿ..

Edited By : Shivu K
Kshetra Samachara

Kshetra Samachara

02/08/2022 01:13 pm

Cinque Terre

3.16 K

Cinque Terre

0

ಸಂಬಂಧಿತ ಸುದ್ದಿ