ಆನೇಕಲ್: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಆನೇಕಲ್ ನ ಗುಡ್ನಹಳ್ಳಿಯ ಸಾಯಿರಾಂ ಶೈಕ್ಷಣಿಕ ಸಂಸ್ಥೆಯ ವತಿಯಿಂದ ಮ್ಯಾರಾಥಾನ್ ಹಮ್ಮಿಕೊಳ್ಳಲಾಯಿತು. ಆನೇಕಲ್ ಪಟ್ಟಣದ ತಿಲಕ್ ವೃತ್ತದಿಂದ ನೂರಾರು ಜನ ವಿಧ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಉತ್ಸಾಹದಿಂದ ಭಾಗವಹಿಸಿದ್ದರು.
ವಿಧ್ಯಾರ್ಥಿಗಳು ಮ್ಯಾರಥಾನ್ ಓಟದಲ್ಲಿ ದೇಶ ಭಕ್ತಿ ಘೋಷಣೆಗಳನ್ನ ಕೂಗುತ್ತಾ ಹೆಜ್ಜೆ ಹಾಕಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಾಯಿರಾಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ. ಷಡಾಕ್ಷರಪ್ಪ, ದೇಶ ಸ್ವಾತಂತ್ರ್ಯಗೊಂಡು 75 ವರ್ಷಗಳನ್ನು ಕಳೆದು ಆಜಾದಿ ಕಾ ಅಮೃತ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆ ಮ್ಯಾರಾಥಾನ್ ಆಯೋಜಿಸಲಾಗಿದೆ. ಸ್ವಾತಂತ್ರ್ಯ ಹೋರಾಟದ ಇತಿಹಾಸದ ಬಗ್ಗೆ ಇಂದಿನ ಯುವ ಪೀಳಿಗೆಗೆ ಪರಿಚಯಿಸಲು ಮತ್ತು ಫಿಟ್ ಇಂಡಿಯಾ ಫ್ರೀಡಂ ರನ್ ಘೋಷವಾಕ್ಯದೊಂದಿಗೆ ಉತ್ತಮ ಆರೋಗ್ಯಕ್ಕಾಗಿ ಈ ಓಟ ಆಯೋಜಿಸಲಾಗಿದೆ ಎಂದರು.
Kshetra Samachara
13/08/2022 06:52 pm