ಆನೇಕಲ್ ತಾಲೂಕಿನ ಸರ್ಜಾಪುರದ ಆವರಣದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ನ್ಯೂ ಕ್ರೇoಬ್ರಿಡ್ಜ್ ಪಬ್ಲಿಕ್ ಪ್ರೌಢಶಾಲೆ ಯಾರಂಡಳ್ಳಿ ಕೋ ಕೋ ಪಂದಾವಳಿಯಲ್ಲಿ ಬಾಲಕರು ಮೊದಲ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿ ತಂದುಕೊಟ್ಟಿದ್ದಾರೆ. ಅದಲ್ದೆ ಇದೇ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಪ್ರತಿಭಾ ಕಾರಂಜಿಯಲ್ಲಿ 15 ಕ್ಕೂ ಹೆಚ್ಚು ಪ್ರಥಮ ಸ್ಥಾನಗಳನ್ನು ಪಡೆದು ಗೌರವವನ್ನು ತಂದುಕೊಟ್ಟಿದ್ದಾರೆ ಇನ್ನು ಶಾಲೆಯ ವಿದ್ಯಾರ್ಥಿಗಳಿಗೆ ಶಾಲೆಯ ಪ ಪ್ರಾಂಶುಪಾಲರಾದ ಕಾಳಿನಾಥ್ ವಿದ್ಯಾರ್ಥಿಗಳಿಗೆ ಅಭಿನಂದನೆಯನ್ನು ಸಲ್ಲಿಸಿದರು. ಮುಂದಿನ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಆಡಲು ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
Kshetra Samachara
25/08/2022 07:41 pm