ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ) ಗ್ರಾಹಕರಿಗೆ ಹೆಚ್ಚುವರಿ ಭದ್ರತಾ ಠೇವಣಿ ಪಾವತಿ ಮಾಡುವಂತೆ ನೋಟಿಸ್ ಜಾರಿ ಮಾಡಿದ್ದು ಸುಳ್ಳು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬೆಸ್ಕಾಂ ಕಚೇರಿಯಲ್ಲಿ ಇಂದು ನಡೆದ ಪ್ರೆಸ್ ಮೀಟ್ ನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 30 ದಿನಗಳೊಳಗಾಗಿ ಹೆಚ್ಚುವರಿ ಭದ್ರತಾ ಠೇವಣಿ (ಎಎಸ್‌ಡಿ) ಪಾವತಿಸದಿದ್ದರೆ, ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಿ ಯಾವುದೇ ನೋಟಿಸ್ ಅಥವಾ ಆದೇಶ ನೀಡಿಲ್ಲ ಎಂದರು.
ಬೆಸ್ಕಾಂ ವ್ಯಾಪ್ತಿಯ ಗ್ರಾಹಕರಿಗೆ ಕಳೆದ ಒಂದೂವರೆ ವರ್ಷದಲ್ಲಿ ನಾಲ್ಕು ಬಾರಿ ವಿದ್ಯುತ್ ದರ ಪರಿಷ್ಕರಣೆಯಾಗಿದೆ. ಇದರಿಂದ ಕೆಲ ಗ್ರಾಹಕರ ವಿದ್ಯುತ್ ಬಳಕೆ ಪ್ರಮಾಣ ಸಾಮಾನ್ಯದಂತೆ ಇದ್ದರೂ ವಿದ್ಯುತ್ ಬಿಲ್ ದುಪ್ಪಟ್ಟಾಗುತ್ತಿದೆ. ಇದಲ್ಲದೆ, ವರ್ಷದಿಂದ ವರ್ಷಕ್ಕೆ ಗೃಹೋಪಯೋಗಿ ಎಲೆಕ್ಟ್ರಿಕ್ ಸಾಧನಗಳ ಹೆಚ್ಚಳ ಮತ್ತಿತರ ಕಾರಣಗಳಿಗೂ ವಿದ್ಯುತ್ ಬಿಲ್ ಹೆಚ್ಚಾಗುತ್ತದೆ. ಈ ರೀತಿ ಹೆಚ್ಚು ಬಿಲ್ ಪಾವತಿಸುತ್ತಿರುವವರೆಲ್ಲರೂ ಹೆಚ್ಚುವರಿ ಬಿಲ್ ಪಾವತಿಗೆ ಹೆಚ್ಚುವರಿ ಭದ್ರತಾ ಠೇವಣಿ ಪಾವತಿಸುವಂತೆ ಬೆಸ್ಕಾಂ ತನ್ನ ಲಕ್ಷಾಂತರ ಗ್ರಾಹಕರಿಗೆ ನೋಟಿಸ್ ಜಾರಿ ಮಾಡಿದೆ ಎಂದು ಕೆಲ ದಿನಗಳ ಹಿಂದೆ ಮಾಧ್ಯಮಗಳಲ್ಲಿ ವರದಿ ಆಗಿತ್ತು.
Kshetra Samachara
24/05/2022 04:08 pm