ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬೆಸ್ಕಾಂನಿಂದ ಗ್ರಾಹಕ ಸ್ನೇಹಿ ಡಿಜಿಟಲ್ ಮೀಟರ್ ಅಳವಡಿಕೆ

ಬೆಂಗಳೂರು: ಬೆಸ್ಕಾಂನ ಬೆಂಗಳೂರು ಮೆಟ್ರೋಪಾಲಿಟನ್ ಪ್ರದೇಶ ವಲಯದಲ್ಲಿನ ಗ್ರಾಹಕರಿಗೆ ತಾವು ಬಳಸುವ ವಿದ್ಯುತ್ ಪ್ರಮಾಣದ ನಿಖರ ಮಾಹಿತಿ ತಿಳಿದುಕೊಳ್ಳಲು ಅನುಕುಲವಾಗುವ ಡಿಎಲ್ಎಮ್ಎಸ್ ಸ್ಟ್ಯಾಟಿಕ್ ಡಿಜಿಟಲ್ ಮಾಪನಗಳನ್ನು ನೀಡಲಾಗುತ್ತಿದೆ.

ಬೆಂಗಳೂರು ಮೆಟ್ರೋಪಾಲಿಟನ್ ಪ್ರದೇಶ ವ್ಯಾಪ್ತಿಯಲ್ಲಿರುವ 17,68,000 ಇಲೆಕ್ಟ್ರೊ ಮೆಕಾನಿಕಲ್ ಮೀಟರ್ ಗಳನ್ನು ಡಿಎಲ್ಎಮ್ಎಸ್ ಸ್ಟ್ಯಾಟಿಕ್ ಡಿಜಿಟಲ್ ಮೀಟರ್ ಗೆ ಬದಲಾವಣೆ ಮಾಡುವ ಕಾರ್ಯ ಜುಲೈ ತಿಂಗಳಲ್ಲಿ ಆರಂಭಗೊಂಡಿದೆ. ರಾಜಾಜಿನಗರ, ರಾಜರಾಜೇಶ್ವರಿನಗರ, ಇಂದಿರಾನಗರ ಮತ್ತು ವೈಟ್ ಫೀಲ್ಡ್ ವಿಭಾಗಗಳಲ್ಲಿ ಈಗಾಗಲೇ 16,000 ಸಿಂಗಲ್ ಫೇಸ್ ಮತ್ತು 3 ಫೇಸ್ ಡಿಜಿಟಲ್ ಮಾಪನಗಳನ್ನು ಅಳವಡಿಸಲಾಗಿದ್ದು ಡಿಜಿಟಲ್ ಮೀಟರ್ ಬದಲಾವಣೆ ಕಾರ್ಯ ಭರದಿಂದ ಸಾಗಿದ್ದು ಪ್ರತಿನಿತ್ಯ 700 ರಿಂದ 900 ಮೀಟರ್ ಗಳನ್ನು ಅಳವಡಿಸಲಾಗುತ್ತಿದೆ. ಬೆಸ್ಕಾಂ ಒಂದು ವಿಭಾಗದಲ್ಲಿ ಮೀಟರ್ ಅಳವಡಿಕೆ ಕಾರ್ಯ ಪೂರ್ಣಗೊಂಡ ನಂತರವೇ ಇನ್ನೊಂದು ವಿಭಾಗದಲ್ಲಿ ಅಳವಡಿಕೆ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.

ವರದಿ - ಗೀತಾಂಜಲಿ

Edited By : Vijay Kumar
Kshetra Samachara

Kshetra Samachara

26/07/2022 07:16 pm

Cinque Terre

1.16 K

Cinque Terre

0

ಸಂಬಂಧಿತ ಸುದ್ದಿ