ಆನೇಕಲ್ :ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೂಸೂರು ಹಾಗೂ ಎಲೆಕ್ಟ್ರಾನಿಕ್ ಸಿಟಿ ಸಿಂಗಸಂದ್ರ ಜಂಕ್ಷನ್ನಲ್ಲಿ ವಾಹನ ಮುಳುಗಡೆಯಾಗಿರುವ ಘಟನೆ ನಡೆದಿದೆ. ವಾಹನ ನಡೆಸಲು ವಾಹನ ಸವಾರರು ಹೈರಾಣಾಗಿದ್ದಾರೆ.
ಇನ್ನು ಈ ಪ್ರತಿ ಬಾರಿ ಮಳೆ ಬಂದಾಗ ಸಿಂಗಸಂದ್ರ ಜಂಕ್ಷನ್ ಎಲೆಕ್ಟ್ರಾನ್ ಸಿಟಿ ರಸ್ತೆಗೆ ಸಂಪರ್ಕ ಕಲ್ಪಿಸುವ ಜಾಗದಲ್ಲಿ ಜನರು ಪಯಣ ಬೆಳೆಸಬೇಕಾದರೆ ಜೀವನ ಕೈಯಲ್ಲಿಟ್ಟುಕೊಂಡು ಹೋರಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಇನ್ನು ರಸ್ತೆಯಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಇನ್ನು ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಯಾಗಿದ್ದು ವಾಹನ ಸವಾರರು ಕಿರಿಕಿರಿಯನ್ನು ಅನುಭವಿಸುತ್ತಿದ್ದಾರೆ. ಟ್ರಾಫಿಕ್ ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಡುವಂತಾಗಿದೆ.
Kshetra Samachara
18/06/2022 06:15 pm